ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ:
ಟಿಟಿ ವಾಹನ ಪಲ್ಟಿಯಾಗಿ ಮೂವರು ಮೃತಪಟ್ಟಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಹೆಗ್ಗೆರೆ ಗ್ರಾಮದಲ್ಲಿ ನಡೆದಿದೆ. ಶಂಕರಿಬಾಯಿ(65), ಕುಮಾರ ನಾಯ್ಕ್(46) ಮತ್ತು ಶ್ವೇತಾ(38) ಮೃತ ಪಟ್ಟಿರುವ ದುರ್ವೈವಿಗಳಾಗಿದ್ದಾರೆ.
ಟಿಟಿ ವಾಹನದಲ್ಲಿ ಪ್ರಯಾಣಿಸುತ್ತಿದ್ದ ಇತರೆ ಐವರಿಗೆ ಗಂಭೀರ ಗಾಯಗಳಾಗಿದ್ದು, ಚಳ್ಳಕೆರೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಚಳ್ಳಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಹೆಗ್ಗೆರೆ ಗ್ರಾಮದ ಬಳಿ ಟಿಟಿ ವಾಹನಕ್ಕೆ ಟಿಪ್ಪರ್ ಡಿಕ್ಕಿ ಹೊಡೆದಿದೆ. ಪರಿಣಾಮ ಟಿಟಿ ವಾಹನ ಪಲ್ಟಿ ಹೊಡೆದಿದ್ದು, ಅದರಲ್ಲಿ ಮೂವರು ಮೃತಪಟ್ಟು, ಐವರು ಗಾಯಗೊಂಡಿದ್ದಾರೆ. ಸದ್ಯ ಗಾಯಾಳುಗಳನ್ನು ಚಳ್ಳಕೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ.