ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬಿಜೆಪಿ ವತಿಯಿಂದ ಬೆಂಗಳೂರಿನಲ್ಲಿ ಮೇ-15 ರಂದು ತಿರಂಗ ಯಾತ್ರೆ ನಡೆಸಲಾಗುವುದು ಎಂದು ಬಿಜೆಪಿ ನಾಯಕ ಮತ್ತು ವಿರೋಧ ಪಕ್ಷದ ನಾಯಕ ಆರ್.ಅಶೋಕ ಹೇಳಿದ್ದಾರೆ.
ಮಂಗಳವಾರ ಅವರು ಮಾತನಾಡಿ, ಆಪರೇಷನ್ ಸಿಂಧೂರ ಮತ್ತು ಸಶಸ್ತ್ರ ಪಡೆಗಳಿಗೆ ಬೆಂಬಲ ಸೂಚಿಸುವ ಸಲುವಾಗಿ ತಿರಂಗ ಯಾತ್ರೆ ಆಯೋಜಿಸಲಾಗಿದೆ. ನಂತರ ಒಂದು ವಾರದ ಬಳಿಕ ರಾಜ್ಯದಲ್ಲಿ ತಿರಂಗಾ ಅಭಿಯಾನ ನಡೆಯಲಿದೆ. ಇದು ರಾಜಕೀಯೇತರ ಅಭಿಯಾನವಾಗಿದ್ದು, ಸಾರ್ವಜನಿಕರು ಭಾಗವಹಿಸುವಂತೆ ಅವರು ಮನವಿ ಮಾಡಿದರು.
ಕರ್ನಾಟಕದಾದ್ಯಂತ ಆಪರೇಷನ್ ಸಿಂಧೂರ ಮತ್ತು ಸಶಸ್ತ್ರ ಪಡೆಗಳಿಗೆ ಬೆಂಬಲ ಸೂಚಿಸಲು ತಿರಂಗ ಯಾತ್ರೆ ನಡೆಸುತ್ತೇವೆ ಎಂದು ತಿಳಿಸಿದರು.
ಸಂಬಿತ್ ಪಾತ್ರ, ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಮತ್ತು ತರುಣ್ ಚುಗ್ ಸೇರಿದಂತೆ ಹಿರಿಯ ಬಿಜೆಪಿ ನಾಯಕರು ತಿರಂಗ ಯಾತ್ರೆ ಸಂಯೋಜಿಸಲಿದ್ದಾರೆ. ಪ್ರಮುಖ ಕೇಂದ್ರ ಸಚಿವರು, ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಪಕ್ಷದ ಹಿರಿಯ ನಾಯಕರು ದೇಶದ ವಿವಿಧ ಭಾಗಗಳಲ್ಲಿ ಈ ಅಭಿಯಾನ ಮುನ್ನಡೆಸಲಿದ್ದಾರೆ ಎನ್ನಲಾಗಿದೆ.
ಈ ತಿರಂಗಾ ಯಾತ್ರೆಯಲ್ಲಿ ಮಾಜಿ ಸೈನಿಕರು, ಸಾಮಾಜಿಕ ಕಾರ್ಯಕರ್ತರು ಮತ್ತು ಪ್ರಮುಖ ಸಾಮಾಜಿಕ ವ್ಯಕ್ತಿಗಳು ಭಾಗವಹಿಸಲಿದ್ದು, ಅವರು ಯಾತ್ರೆ ಮುನ್ನಡೆಸಲಿದ್ದಾರೆ. ದೇಶದಾದ್ಯಂತ ಬಿಜೆಪಿ ಆಪರೇಷನ್ ಸಿಂಧೂರದ ಯಶಸ್ಸನ್ನು ಎತ್ತಿ ತೋರಿಸಲು ಪತ್ರಿಕಾಗೋಷ್ಠಿಗಳನ್ನು ಆಯೋಜಿಸುತ್ತದೆ.