ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಜಿಲ್ಲಾಡಳಿತ, ಪೊಲೀಸ್ ಇಲಾಖೆ ಹಾಗೂ ಪ್ರಾದೇಶಿಕ ಸಾರಿಗೆ ಕಚೇರಿ ಅವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ–2025 ಅಂಗವಾಗಿ ಪೊಲೀಸ್ ಸಿಬ್ಬಂದಿಗೆ ಹೆಲ್ಮೆಟ್ ವಿತರಣೆ ಹಾಗೂ 9 ತಿಂಗಳಿಂದ 04 ವರ್ಷ ವಯೋಮಾನದೊಳಗಿನ ಮಕ್ಕಳನ್ನು ಹೊಂದಿರುವ ಪೋಷಕರಿಗೆ
ದ್ವಿಚಕ್ರ ವಾಹನದಲ್ಲಿ ಸುರಕ್ಷಿತವಾಗಿ ಮಕ್ಕಳನ್ನು ಕೊಂಡೊಯ್ಯಲು ಬಳಸುವ ಶಿಶು ರಕ್ಷಾ ಕವಚ (ಸೇಫ್ಟಿ ಹಾರ್ನೆಸ್) ವನ್ನು ಸಾಂಕೇತಿಕವಾಗಿ ವಿತರಣೆ ಮಾಡುವ ಕಾರ್ಯಕ್ರಮ ಫೆ. 12 ರಂದು ಬೆ. 10 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಜಿಲ್ಲಾಧಿಕಾರಿ ಟಿ. ವೆಂಕಟೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಪ್ರಾದೇಶಿಕ ಸಾರಿಗೆ ಅಧಿಕಾರಿ ಭರತ್ ಕಾಳಿ ಸಿಂಘೆ ಅವರು ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.