ಇಂದು ಮಹಿಳಾ ಮತ್ತು ಮಕ್ಕಳ ದಸರಾ  

News Desk

ಚಂದ್ರವಳ್ಳಿ ನ್ಯೂಸ್, ತುಮಕೂರು:
ಜಿಲ್ಲೆಯಲ್ಲಿ ಮೊದಲ ಬಾರಿಗೆ ಸರ್ಕಾರದಿಂದ ಆಚರಿಸಲಾಗುತ್ತಿರುವ ತುಮಕೂರು ದಸರಾ ಅಂಗವಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಅಕ್ಟೋಬರ್ ೬ರಂದು  ಮಹಿಳಾ ಮತ್ತು ಮಕ್ಕಳ ದಸರಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಎಂ.ಎನ್.ಚೇತನ್ ಕುಮಾರ್ ತಿಳಿಸಿದ್ದಾರೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಮಹಾನಗರಪಾಲಿಕೆ, ರಾಜ್ಯ ಬಾಲಭವನ ಸೊಸೈಟಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ನಗರದ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಅಕ್ಟೋಬರ್ ೬ರ ಭಾನುವಾರ ಬೆಳಿಗ್ಗೆ ೧೦ ಗಂಟೆಗೆ ಕಾರ್ಯಕ್ರಮ ನಡೆಯಲಿದ್ದುಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ಮತ್ತು ವೃಕ್ಷಮಾತೆ ನಾಡೋಜ ಹಾಗೂ ಪರಿಸರ ರಾಯಭಾರಿ ಡಾ: ಸಾಲುಮರದ ತಿಮ್ಮಕ್ಕ ಅವರು ಉದ್ಘಾಟಿಸಲಿದ್ದಾರೆ.

ನಗರ ಶಾಸಕ ಜಿ.ಬಿ.ಜ್ಯೋತಿಗಣೇಶ್ ಅಧ್ಯಕ್ಷತೆವಹಿಸಲಿದ್ದು, ಕಾರ್ಯಕ್ರಮದಲ್ಲಿ ಜಿಲ್ಲೆಯ ಪ್ರತಿನಿಧಿಗಳು ಸೇರಿದಂತೆ ವಿವಿಧ ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಸಾಂಸ್ಕೃತಿಕ ಕಾರ್ಯಕ್ರಮ ವಿವರ: ಕಾರ್ಯಕ್ರಮದಡಿ ಅಕ್ಟೋಬರ್ ೬ರಂದು ಬೆಳಿಗ್ಗೆ ೭ ಗಂಟೆಗೆ ಎನ್.ಸಿ.ಸಿ ಕಚೇರಿಯಿಂದ ಮಹಾತ್ಮಗಾಂಧಿ ಕ್ರೀಡಾಂಗಣ ರಸ್ತೆವರೆಗೂ ರಂಗೋಲಿ ಸ್ಪರ್ಧೆ, ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಬೆಳಿಗ್ಗೆ ೧೦ ರಿಂದ ಸಂಜೆ ೫ ಗಂಟೆಯವರೆಗೆ ವಿವಿಧ ಕ್ರೀಡಾ ಚಟುವಟಿಕೆಗಳು, ಎಂ.ಜಿ.ರಸ್ತೆಯ ಜಿಲ್ಲಾ ಬಾಲಭವನ ಸಭಾಂಗಣದಲ್ಲಿ ಸಂಜೆ ೫ ರಿಂದ ರಾತ್ರಿ ೯ ಗಂಟೆಯವರೆಗೆ ತಾಯಿ ಮತ್ತು ಮಗುವಿನ ಸಾಂಪ್ರದಾಯಿಕ ಉಡುಗೆಯ ವೇಷಭೂ?ಣ ಸ್ಪರ್ಧೆ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.

 

- Advertisement -  - Advertisement -  - Advertisement - 
Share This Article
error: Content is protected !!
";