ದಂಡವಿಲ್ಲದೆ ಸ್ನಾತಕೋತ್ತರ ಕೋರ್ಸುಗಳ ಪ್ರವೇಶಾತಿಗೆ ಇಂದೇ ಕೊನೆ ದಿನ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
2024-25
ನೇ ಶೈಕ್ಷಣಿಕ ಸಾಲಿಗೆ ಬೆಂಗಳೂರು ನಗರ ವಿಶ್ವವಿದ್ಯಾನಿಲಯದ, ಜ್ಞಾನಜ್ಯೋತಿ ಸೆಂಟ್ರಲ್ ಕಾಲೇಜು ಆವರಣದ ಸ್ನಾತಕೋತ್ತರ ವಿಭಾಗಗಳು ಮತ್ತು ಸಂಯೋಜಿತ ಕಾಲೇಜುಗಳಲ್ಲಿ ಲಭ್ಯವಿರುವ ಸ್ನಾತಕೋತ್ತರ ಕೋರ್ಸುಗಳ ಪ್ರವೇಶಕ್ಕೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸುವ ಅವಧಿಯನ್ನು ಸೆಪ್ಟೆಂಬರ್ 30, 2024 ವರೆಗೆ ಮುಂದೂಡಲಾಗಿದೆ.

 ಅಭ್ಯರ್ಥಿಗಳು ಅರ್ಜಿಗಳನ್ನು https://uucms.karnataka.gov.in/Login/Index. ಮೂಲಕ ಸೆಪ್ಟೆಂಬರ್ 30,2024 ವರೆಗೆ ಯಾವುದೇ  ದಂಡ ಶುಲ್ಕವಿಲ್ಲದೆ ಸಲ್ಲಿಸಬಹುದಾಗಿದ್ದು ಆನಂತರ ಅಕ್ಟೋಬರ್ 05, 2024 ವರೆಗೆ ರೂ.200 ದಂಡ ಶುಲ್ಕದೊಂದಿಗೆ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ:080-22961016/22131385 ಇಮೇಲ್: https://uucms. ಅಥವಾ ಕುಲಸಚಿವರು, ಬೆಂಗಳೂರು ನಗರ ವಿಶ್ವವಿದ್ಯಾನಿಲಯ, ಇವರನ್ನು ಸಂಪರ್ಕಿಸಬಹುದು ಎಂದು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.

 

 

- Advertisement -  - Advertisement - 
Share This Article
error: Content is protected !!
";