ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ವಿಜ್ಞಾನ ಕೇಂದ್ರದ ವತಿಯಿಂದ ಕುವೆಂಪು ಜನ್ಮ ದಿನಾಚರಣೆ ಅಂಗವಾಗಿ ಕಲ್ಲಹಳ್ಳಿ ಗ್ರಾಮದ ಬಾಪೂಜಿ ಗ್ರಾಮಾಂತರ ಪ್ರೌಢಶಾಲೆಯಲ್ಲಿ ಡಿ.29ರಂದು ಸೋಮವಾರ ಬೆಳಿಗ್ಗೆ 11 ಗಂಟೆಗೆ ವಿಶ್ವ ಮಾನವ ದಿನಾಚರಣೆ ಹಮ್ಮಿಕೊಳ್ಳಲಾಗಿದೆ.
ಶಾಲೆಯ ಮುಖ್ಯಶಿಕ್ಷಕ ಜಿ.ರಾಮಶೇಖರ್ ಅಧ್ಯಕ್ಷತೆ ವಹಿಸುವರು. ಚಿತ್ರದುರ್ಗ ವಿಜ್ಞಾನ ಕೇಂದ್ರದ ಅಧ್ಯಕ್ಷ ಜೆ.ಯಾದವರೆಡ್ಡಿ ಉದ್ಘಾಟಿಸುವರು. ಚಿತ್ರದುರ್ಗ ವಿಜ್ಞಾನ ಕೇಂದ್ರದ ಉಪಾಧ್ಯಕ್ಷ ದಾಸೇಗೌಡ. ಎಂ. ಆರ್ ವಿಶೇಷ ಉಪನ್ಯಾಸ ನೀಡಲಿದ್ದಾರೆ.
ದ್ಯಾಮವ್ವನಹಳ್ಳಿ ಗ್ರಾಪಂ ಅಧ್ಯಕ್ಷೆ ಎಂ.ರಾಗಿಣಿ, ವಿಜ್ಞಾನ ಕೇಂದ್ರದ ಕಾರ್ಯದರ್ಶಿ ರಾಜಕುಮಾರ್, ಖಜಾಂಚಿ ರಾಮಪ್ಪ, ಸಹ ಕಾರ್ಯದರ್ಶಿ ನವೀನ್ ಪಿ.ಆಚಾರ್ ಪಾಲ್ಗೊಳ್ಳಲಿದ್ದಾರೆಂದು ಸಂಘಟಕರು ತಿಳಿಸಿದ್ದಾರೆ.

