ಇಂದು ರಾಜ್ಯಕ್ಕೆ ಸುದಿನ, ಬಯಲು ಸೀಮೆ ಜನರು ಈ ದಿನ ಎಂದೂ ಮರೆಯುವಂತಿಲ್ಲ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಎತ್ತಿನಹೊಳೆ ಯೋಜನೆ: ಬತ್ತಿದ ಕನಸಿಗೆ ಜೀವಜಲದ ಧಾರೆ, ಬಯಲುಸೀಮೆಯನ್ನು ಬಂಗಾರದ ಸೀಮೆ ಮಾಡುವ ಶುಭ ಘಳಿಗೆಡಿ.ಕೆ.ಶಿವಕುಮಾರ್‌, ಉಪಮುಖ್ಯಮಂತ್ರಿ…

 ʼಬಯಲುಸೀಮೆʼ ಎಂಬ ಹೆಸರು ಕೇಳಿದಾಕ್ಷಣ ನಮ್ಮ ಮನಸ್ಸಿಗೆ ಬರಡು ಭೂಮಿಯ ಚಿತ್ರಣ ಬರುತ್ತದೆ. ಕೆಲವು ದಶಕಗಳಿಂದಲೇ ಬಯಲುಸೀಮೆಯಲ್ಲಿ ನೀರಿನ ಕೊರತೆ ಕಂಡುಬಂದಿತ್ತು. ಯಾವುದೇ ಸರ್ಕಾರಗಳು ಬಂದಾಗಲೂ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಬಗ್ಗೆ ಚರ್ಚೆಯಾಗುತ್ತಿತ್ತು. ಆದರೆ ಪರಿಹಾರ ಮಾತ್ರ ಶೂನ್ಯ. ಬಯಲುಸೀಮೆಯ ಬಹುತೇಕ ಭಾಗ ಹಿಂದುಳಿಯುವಲ್ಲಿ ನೀರಾವರಿಯ ಕೊರತೆ ದೊಡ್ಡ ಪರಿಣಾಮ ಬೀರಿದೆ. ತರಕಾರಿ, ಹೂವು, ಹಣ್ಣು ಹಾಗೂ ರೇಷ್ಮೆ ಕೃಷಿ ಪ್ರಧಾನವಾಗಿರುವ ಬಯಲುಸೀಮೆಗೆ ಜೀವಜಲವನ್ನು ಒದಗಿಸುವುದು ಅನೇಕ ದಶಕಗಳ ಕನಸು. ಕನಸನ್ನು ನನಸಾಗಿಸಲು ಹಿಂದಿನ ಸರ್ಕಾರ ಪ್ರಯತ್ನ ಪಟ್ಟಿದ್ದರೂ, ಬದ್ಧತೆ ಹಾಗೂ ಇಚ್ಛಾಶಕ್ತಿಯ ಕೊರತೆಯಿಂದಾಗಿ ಅದು ನೆರವೇರಲಿಲ್ಲ. ಕಾಂಗ್ರೆಸ್ಸರ್ಕಾರದ ಆಡಳಿತವಾಧಿಯಲ್ಲಿ, ಬಯಲುಸೀಮೆಗೆ ನೀರಿನ ಸಿಂಚನವಾಗಿದೆ. ಇದೇ ಎತ್ತಿನಹೊಳೆ ಯೋಜನೆಯ ಮೊದಲ ಹಂತದ ನೀರು ಪೂರೈಕೆ ಕಾರ್ಯ.

 ಸ್ವರ್ಣ ಗೌರಿ ಮನೆಗೆ ಬರುತ್ತಾಳೆ ಎಂದರೆ ಎಲ್ಲ ಬಗೆಯ ಸಮೃದ್ಧಿ ಮನೆಯಲ್ಲಿ ನೆಲೆಯಾಗಲಿದೆ ಎಂದೇ ಅರ್ಥ. ಬಾರಿಯ ಗೌರಿ ಹಬ್ಬ ಅಂತಹ ಜಲ ಸಮೃದ್ಧಿಯನ್ನು ತರುತ್ತಿದೆ. ಭಗೀರಥ ಕಾರ್ಯವನ್ನು ಮಾಡುವ ಅವಕಾಶ ಕಾಂಗ್ರೆಸ್ಸರ್ಕಾರಕ್ಕೆ, ಅದು ಕೂಡ ನನಗೆ ದೊರಕಿರುವುದು ಪುಣ್ಯವೆಂದೇ ಭಾವಿಸಿದ್ದೇನೆ. ನನ್ನ ಕ್ಷೇತ್ರ ಕನಕಪುರವಾದರೂ ಸುತ್ತಮುತ್ತಲಿನ ಜಿಲ್ಲೆಗಳ ಬಗ್ಗೆ ಸೂಕ್ಷ್ಮವಾಗಿ ಗಮನಿಸುತ್ತಿದ್ದೆ. ಒಂದು ಕಡೆ ಸಂಪೂರ್ಣ ಅಭಿವೃದ್ಧಿ ಹೊಂದಿದ ರಾಜಧಾನಿ ಬೆಂಗಳೂರು. ಇದರ ಸುತ್ತಮುತ್ತ ನೀರಾವರಿಗೂ ಕಷ್ಟ ಪಡುವ ಜಿಲ್ಲೆಗಳು. ಸಮಸ್ಯೆಯನ್ನು ನಿವಾರಿಸಲು ನಾನು ನೀರಾವರಿ ಕ್ಷೇತ್ರದ ಬಗ್ಗೆ ಹೆಚ್ಚು ಆಸಕ್ತಿ ವಹಿಸಿದೆ. ನೀರಾವರಿ ಎಂದರೆ ಕೇವಲ ಒಂದು ಇಲಾಖೆ, ಅನುದಾನ ಅಥವಾ ಯೋಜನೆಗಳಲ್ಲ. ಇದು ಜನರ ಜೀವನಾಡಿ. ಒಂದೇ ಒಂದು ನೀರಾವರಿ ಯೋಜನೆ ಇಡೀ ಪ್ರದೇಶದ ಜೀವನ ಗುಣಮಟ್ಟವನ್ನೇ ಬದಲಿಸಿಬಿಡುತ್ತದೆ. ಕೃಷ್ಣರಾಜಸಾಗರ ಜಲಾಶಯ ಹಳೆ ಮೈಸೂರು ಭಾಗದ ಸಮಗ್ರ ಪ್ರಗತಿಗೆ ಹೇಗೆ ಕಾರಣವಾಗಿದೆ ಎಂಬುದನ್ನು ನಾನು ಚಿಕ್ಕಂದಿನಿಂದಲೂ ನೋಡಿದ್ದೇನೆ. ಇಂತಹ ಯೋಜನೆಯೊಂದನ್ನು ನಮ್ಮ ಬಯಲುಸೀಮೆಗೆ ನೀಡಬೇಕು ಎನ್ನುವುದು ನನ್ನ ಬಹುವರ್ಷಗಳ ಕನಸಾಗಿತ್ತು. ಅದನ್ನು ಎತ್ತಿನಹೊಳೆಯ ಮೂಲಕ ನೆರವೇರಿಸಿದ್ದೇನೆ ಎನ್ನುವುದು ನನ್ನ ಬದುಕಿನ ಸಾರ್ಥಕತೆಯ ಕ್ಷಣ.

 ಇದೇನೂ ದಿಢೀರನೆ ಬಂದ ಆಲೋಚನೆಯಲ್ಲ. ಕಾಂಗ್ರೆಸ್ಸರ್ಕಾರ ಅಧಿಕಾರಕ್ಕೆ ಬರುತ್ತದೆ ಎಂದೇ ಬಲವಾಗಿ ನಂಬಿದ್ದ ನಾನು, ಸಮಯದಲ್ಲಿ ಎತ್ತಿನಹೊಳೆಯ ಯೋಜನೆಗೆ ಕಾಯಕಲ್ಪ ನೀಡೀಯೇ ತೀರುತ್ತೇನೆ ಎಂದು ಸಂಕಲ್ಪ ಮಾಡಿದ್ದೆ. ಅಂದುಕೊಂಡ ಹಾಗೆಯೇ ನಮ್ಮ ಪಕ್ಷ ಅಧಿಕಾರಕ್ಕೆ ಬಂದ ಕೂಡಲೇ ಎತ್ತಿನಹೊಳೆ ಯೋಜನೆಗೆ ಸಂಪೂರ್ಣ ಒತ್ತು ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ದೃಢ ನಾಯಕತ್ವದಲ್ಲಿ, ಕಾಮಗಾರಿಗಳಿಗೆ ವೇಗ ನೀಡಿ, ಕಾಲಮಿತಿಯಲ್ಲಿ ಪೂರ್ಣಗೊಳಿಸಲು ಕ್ರಮ ವಹಿಸಿದೆ. ಅದರ ಫಲಿತಾಂಶ ಇಂದು ನಮ್ಮೆಲ್ಲರ ಮುಂದಿದೆ.  

ಎತ್ತಿನಹೊಳೆ ಯೋಜನೆಯ ಮೊದಲ ಹಂತದ ನೀರು ಪೂರೈಕೆಗೆ ಸೆಪ್ಟೆಂಬರ್‌ 6 ಶುಭ ಶುಕ್ರವಾರದಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಹೆಬ್ಬನಹಳ್ಳಿ ವಿತರಣಾ ತೊಟ್ಟಿಯ 4 ರಿಂದ 32 ಕಿ. ಮೀ. ದೂರದಲ್ಲಿ ಎಸ್ಕೇಪ್ ಚಾನೆಲ್ ರೂಪಿಸಿದ್ದು, ಅಲ್ಲಿಂದ ನಾಲೆಯ ಮೂಲಕ ವಾಣಿವಿಲಾಸ ಸಾಗರಕ್ಕೆ ನೀರು ಪೂರೈಸಲಾಗುತ್ತದೆ. ನವೆಂಬರ್ 1 ವೇಳೆಗೆ ಸುಮಾರು 5 ಟಿಎಂಸಿ ನೀರನ್ನು ಮೇಲಕ್ಕೆ ಎತ್ತಲಾಗುತ್ತದೆ. ಇದು ಕೇವಲ ಪೂರ್ಣಗೊಂಡ ಕಾಮಗಾರಿಗೆ ಚಾಲನೆ ನೀಡುವ ದಿನವಲ್ಲ. ಇದು ಬಯಲುಸೀಮೆಯ ʼಬರಡುʼ ಎಂಬ ಟೀಕೆಯನ್ನು ತೊಡೆದುಹಾಕುವ ಗಳಿಗೆ.

ಕಾಂಗ್ರೆಸ್ಸರ್ಕಾರ ಅಧಿಕಾರಕ್ಕೆ ಬರುವ ಮುನ್ನ ಗ್ಯಾರಂಟಿಗಳ ಭರವಸೆ ನೀಡಿತ್ತು. ಕೇವಲ ಗ್ಯಾರಂಟಿಗಳ ಆಧಾರದಲ್ಲೇ ಸರ್ಕಾರ ಅಧಿಕಾರಕ್ಕೆ ಬಂದಿದೆ ಎಂಬುದು ಊಹಾಪೋಹದ ಮಾತು. ಗ್ಯಾರಂಟಿಗಳು ಪ್ರಮುಖವಾಗಿದ್ದರೂ, ಅವುಗಳ ಜೊತೆಗೆ ನೀರಾವರಿ, ಕೃಷಿ ಸುಧಾರಣೆ, ಕೈಗಾರಿಕಾಭಿವೃದ್ಧಿ, ನಿರುದ್ಯೋಗ ನಿವಾರಣೆ ಮೊದಲಾದ ಭರವಸೆಗಳು ಜನರ ಗಮನ ಸೆಳೆದಿತ್ತು. ಪೈಕಿ ಎತ್ತಿನಹೊಳೆ ಯೋಜನೆಯನ್ನು ಪೂರ್ಣಗೊಳಿಸುವ ಬದ್ಧತೆಯನ್ನು ಪ್ರಣಾಳಿಕೆಯಲ್ಲಿ ತಿಳಿಸಲಾಗಿತ್ತು. ಅದರಂತೆ ಒಂದೂವರೆ ವರ್ಷದೊಳಗೆ ಯೋಜನೆಯ ಮೊದಲ ಹಂತದ ನೀರು ಸರಬರಾಜು ಕಾರ್ಯ ಸಾಕಾರಗೊಂಡಿದೆ.  ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಮಾತ್ರವಲ್ಲದೆ, ರಾಮನಗರದ ಕೆಲವು ಭಾಗ, ತುಮಕೂರು, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಗೂ ಜೀವಜಲ ದೊರೆಯಲಿದೆ.

 ನೀರಾವರಿ ಪ್ರಗತಿ-
2027 ಕ್ಕೆ ಯೋಜನೆಯ ಕಾಮಗಾರಿಯನ್ನು ಪೂರ್ಣಗೊಳಿಸುವುದು ಕಾಂಗ್ರೆಸ್ಸರ್ಕಾರದ ಆದ್ಯತೆಯ ಮಹತ್ವಕಾಂಕ್ಷೆ. ಪ್ರಣಾಳಿಕೆಯಲ್ಲಿದ್ದ ʼಕಾಂಗ್ರೆಸ್ಬರಲಿದೆ, ಪ್ರಗತಿ ತರಲಿದೆʼ ಎಂಬ ಘೋಷಣೆಯಂತೆಯೇ ಈಗ ಎತ್ತಿನಹೊಳೆಯ ನೀರಿನ ಮೂಲಕ ನೀರಾವರಿಗೆ ಪ್ರಗತಿ ತರಲಾಗುತ್ತಿದೆ. ಯೋಜನೆಯಡಿ ಒಟ್ಟು 24.01 ಟಿಎಂಸಿ ನೀರನ್ನು ಕುಡಿಯುವ ನೀರು ಹಾಗೂ ಕೆರೆಗಳನ್ನು ತುಂಬಿಸಲು ಬಳಸಿಕೊಳ್ಳಲಾಗುತ್ತದೆ. ಇದರಿಂದ ಬರ ಪೀಡಿತವಾದ 29 ತಾಲೂಕುಗಳ 6,657 ಗ್ರಾಮಗಳ 75.59 ಲಕ್ಷ ಜನರ ದಾಹ ತೀರಲಿದೆ. ಜೊತೆಗೆ 5 ಜಿಲ್ಲೆಗಳ 527 ಕೆರೆಗಳ ಅಂತರ್ಜಲ ಮರುಪೂರಣ ಕಾರ್ಯವೂ ನಡೆಯಲಿದೆ. ಇದಕ್ಕಾಗಿ ರಾಜ್ಯ ಸರ್ಕಾರ ಖರ್ಚು ಮಾಡುತ್ತಿರುವುದು ಬರೋಬ್ಬರಿ 23,251 ಕೋಟಿ ರೂ! 

2011-12 ರಲ್ಲಿ ಅಂದಿನ ಬಿಜೆಪಿ ಸರ್ಕಾರ ರಾಜಕೀಯ ಲಾಭದ ದೃಷ್ಟಿಯಿಂದ ದೂರದೃಷ್ಟಿ ಇಲ್ಲದೆ ಯೋಜನೆ ರೂಪಿಸಿದ್ದರಿಂದ ಅದು ಬದ್ಧತೆಯಿಂದ ಮುಂದುವರಿಯಲಿಲ್ಲ. ಬಳಿಕ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ, ಯೋಜನೆಯ ಮೊತ್ತವನ್ನು ಹೆಚ್ಚಿಸಿ, 2014 ಫೆಬ್ರವರಿಯಲ್ಲಿ ಅನುಮೋದನೆ ನೀಡಿತು. ನಂತರ ಚಿಕ್ಕಬಳ್ಳಾಪುರದಲ್ಲಿ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಾಗಿತ್ತು. ಅಂದು ಆರಂಭವಾದ ಯೋಜನೆ, ನಡುವೆ ಬಿಜೆಪಿ ಸರ್ಕಾರ ಇದ್ದ ಅವಧಿಯಲ್ಲೂ ಪೂರ್ಣಗೊಳ್ಳಲಿಲ್ಲ. ಮತ್ತೆ ಯೋಜನೆಗೆ ಚುರುಕು ನೀಡಲು ಕಾಂಗ್ರೆಸ್ಪಕ್ಷವೇ ಅಧಿಕಾರಕ್ಕೆ ಬರಬೇಕಾಯಿತು. ಅದರಂತೆ ಈಗ ಕಾಮಗಾರಿಗೆ ವೇಗ ನೀಡಿ ನೀರೆತ್ತುವ ಕಾರ್ಯವನ್ನು ನನಸು ಮಾಡಲಾಗಿದೆ.

ಇದು ಬಯಲುಸೀಮೆಯ ನೀರಾವರಿ ಕ್ರಾಂತಿಯಲ್ಲಿ ಆರಂಭದ ಹೆಜ್ಜೆ. ಹೆಜ್ಜೆಯನ್ನು ಇನ್ನಷ್ಟು ಮುಂದಕ್ಕೆ ಒಯ್ದು, ಎತ್ತಿನಹೊಳೆ ಯೋಜನೆಯನ್ನು ಸರ್ಕಾರದ ಅವಧಿಯಲ್ಲೇ ಪೂರ್ಣಗೊಳಿಸುವುದು ನಮ್ಮ ಮುಂದಿನ ಗುರಿ ಮತ್ತು ಸವಾಲು. ಅದಕ್ಕಾಗಿ ಜನಬಲವೊಂದಿದ್ದರೆ ಸಾಕು.

 ಡಿಕೆಶಿ ಬದ್ದತೆ – ಇಚ್ಛಾಶಕ್ತಿಯ ಪ್ರತಿರೂಪ ಎತ್ತಿನಹೊಳೆ-
ನೀರಾವರಿ ಯೋಜನೆಗಳಿಂದ ಕೃಷಿ ಕ್ಷೇತ್ರದ ಬಲವರ್ಧನೆ ಮತ್ತು ಕುಡಿಯುವ ನೀರಿನ  ಮೂಲಭೂತ ಸೌಕರ್ಯವನ್ನು ಹೊಂದಿದ  ಮಾನವ ಸಂಪನ್ಮೂಲದ ಅಭಿವೃದ್ಧಿ ಯಾವುದೇ ರಾಜ್ಯದ ಪ್ರಗತಿಯ ಮೂಲ ಎನ್ನುವುದರಲ್ಲಿ ಅಚಲ ನಂಬಿಕೆ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ರಾಜ್ಯದಲ್ಲಿ ಜಾರಿಗೊಂಡಿರುವ ಮಹತ್ವದ ನೀರಾವರಿ ಯೋಜನೆಗಳಲ್ಲಿ ಎದ್ದು ಕಾಣುವುದು ಕುಡಿವ ನೀರಿನ ಸಮಸ್ಯೆಯನ್ನು ನೀಗಿಸುವ ಎತ್ತಿನಹೊಳೆ ಯೋಜನೆ ಎಂಬ ಮುತ್ತು. 

ಮಳೆರಾಯ ಉಯ್ಯಲಿ ಕೆರೆರಾಯ ತುಂಬಲಿ-
ನಮ್ಮ ಜನಪದದ ಈ ಆಶಯ ಎತ್ತಿನಹೊಳೆ ಯೋಜನೆಯಾಗಿ ಅನುಷ್ಠಾನರೂಪವಾಗಿ ಕಂಗೊಳಿಸುವ ಕ್ಷಣಕ್ಕೆ ಜಾತಕ ಪಕ್ಷಿಯಂತೆ ಕಾದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಶಿವಕುಮಾರ್ ಅವರುಗಳು ಕಂಡ ಕನಸು, ಕೈಗೊಂಡ ಸಂಕಲ್ಪ ಗೌರಿಹಬ್ಬದ ದಿನದಂದು (ಸೆ. 6) ಸಾಕಾರಗೊಂಡು ನಾಡಿನ ಜನತೆಯ ಹಬ್ಬದ ಸಂಭ್ರಮವನ್ನು ಇನ್ನಷ್ಟು ಇಮ್ಮುಡಿಗೊಳಿಸಿದೆ. ಕರುನಾಡಿನ ಸರ್ವೋದಯಕ್ಕಾಗಿ ಅವಿರತ ಶ್ರಮಿಸುತ್ತಿರುವ ರಾಜ್ಯ ಸರ್ಕಾರದ ಕಾರ್ಯಬದ್ದತೆಗೆ ಎತ್ತಿನಹೊಳೆ‍ ಯೋಜನೆ ಸಾಕ್ಷಿಯಾಗಿದೆ.

ಉಪಮುಖ್ಯಮಂತ್ರಿ ಮತ್ತು ಜಲಸಂಪನ್ಮೂಲ ಸಚಿವರಾಗಿ ಅಧಿಕಾರ ವಹಿಸಿಕೊಂಡ ಡಿ.ಕೆ. ಶಿವಕುಮಾರ್ ಅವರು ಮೊದಲ ದಿನದಿಂದಲೇ ಎತ್ತಿನ ಹೊಳೆ ಯೋಜನೆಯನ್ನು ಸವಾಲಾಗಿ ಸ್ವೀಕರಿಸಿದ್ದರು. 2019 ರಲ್ಲಿ ಮತ್ತು ವರ್ಷದ ಹಿಂದೆ (23, ಆಗಸ್ಟ್‌ 2023) ಎತ್ತಿನಹೊಳೆ ಕಾಮಗಾರಿ ನಡೆಯುತ್ತಿದ್ದ ಸ್ಥಳಗಳಿಗೆ ಭೇಟಿ ನೀಡಿ, ಅಧ್ಯಯನ ನಡೆಸಿದ್ದ ಅವರು ಅಲ್ಲಿದ್ದ ಸಮಸ್ಯೆಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಿ, ಕಾಮಗಾರಿ ಪರಿಶೀಲಿಸುತ್ತಲೇ ಅವರು ನಿವಾರಣೆಗೂ ತಮ್ಮಲೇ ಕ್ರಿಯಾಯೋಜನೆಯನ್ನು ರೂಪಿಸಿಕೊಂಡಿದ್ದರು.

2014 ರಲ್ಲಿ ಮುಖ್ಯಮಂತ್ರಿಗಳಾಗಿದ್ದ ಸಿದ್ದರಾಮಯ್ಯ ಅವರು ಎತ್ತಿನ ಹೊಳೆ ಯೋಜನೆಗೆ ಚಾಲನೆ ನೀಡಿದ್ದರು. 2018-19ರ ಸಮ್ಮಿಶ್ರ ಸರ್ಕಾರದ ವೇಳೆ ಜಲಸಂಪನ್ಮೂಲ ಸಚಿವರಾಗಿದ್ದ ಡಿ.ಕೆ. ಶಿವಕುಮಾರ್ ಅವರು ಎತ್ತಿನಹೊಳೆ ಯೋಜನೆಗೆ ಸಂಬಂಧಿಸಿದಂತೆ ಹಲವಾರು ಸಭೆಗಳನ್ನು ನಡೆಸಿ, ಸ್ಥಳ ಭೇಟಿ ಕೈಗೊಂಡು ಯೋಜನೆಗೆ ವೇಗ ನೀಡುವ ಪ್ರಯತ್ನ ನಡೆಸಿದ್ದರು. ಬದಲಾದ ಕಾಲದಲ್ಲಿ ಯೋಜನೆಯ ತನ್ನ ವೇಗವನ್ನು ಕಳೆದುಕೊಂಡು 2021 ರ ಹೊತ್ತಿಗೆ ಏದುಸಿರು ಬಿಡುತ್ತಿತ್ತು. ಕುಂಟುತ್ತಾ ಸಾಗಿದ್ದ ಈ ಯೋಜನೆಗೆ ಮತ್ತೊಮ್ಮೆ ಅಧಿಕಾರಕ್ಕೆ ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರುಗಳು ಇನ್ನಿಲ್ಲದ ವೇಗ ನೀಡಿದ್ದರು.

ಅದರಲ್ಲೂ ಎದುರಾದ ಸಮಸ್ಯೆಗಳಿಗೆ ಡಿ.ಕೆ. ಶಿವಕುಮಾರ್ ಅವರು ಖುದ್ದಾಗಿ ಆಯಾ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ, ಅನುಮತಿ ಪಡೆದುಕೊಳ್ಳುವಲ್ಲಿಯೂ ಯಶಸ್ವಿಯಾಗಿದ್ದರು. ಇವುಗಳಿಗೆ ಕೆಲವೊಂದು ನಿರ್ದಶನಗಳು ಇಲ್ಲಿವೆ. 2021ರಲ್ಲಿ ಹೆಬ್ಬನಹಳ್ಳಿ ಸಬ್ ಸ್ಟೇಷನ್ ಪೂರ್ಣಗೊಂಡರೂ ಚಾರ್ಜಿಂಗ್ ಮಾಡಲು ಕೆಪಿಟಿಸಿಲ್‌ ನಿಂದ ನಿರಪೇಕ್ಷಣಾ ಪತ್ರ ಪಡೆಯಲು 3 ವರ್ಷಗಳಷ್ಟು ಕಾಲ ವಿಳಂಬವಾಗಿತ್ತು. ಇಂಧನ ಇಲಾಖೆ ಅಧಿಕಾರಿಗಳ ಜತೆ ಮಾತನಾಡಿ ಈ ಯೋಜನೆಗೆ ಅಗತ್ಯ ಸಹಕಾರ ಪಡೆಯಲು ಯಶಸ್ವಿಯಾಗಿದ್ದರು. ಅದೇ ರೀತಿ, ಯೋಜನೆ ಮಾರ್ಗದಲ್ಲಿ ಬರುವ ಅರಣ್ಯ ಪ್ರದೇಶದ ಭೂಸ್ವಾಧೀನ ವಿಚಾರದಲ್ಲಿ ಉಂಟಾದ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಅರಣ್ಯ ಇಲಾಖೆ ಜತೆ ಸಮನ್ವಯತೆ ಸಾಧಿಸಿಸುವಲ್ಲಿ ಶಿವಕುಮಾರ್ ಅವರ ಪಾತ್ರ ಪ್ರಮುಖವಾಗಿದೆ

ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆ ಮೊದಲ ಹಂತದ ಏತ ಕಾಮಗಾರಿ ಪ್ಯಾಕೇಜ್-4ರ ಕಾಮಗಾರಿ ಕೆಲಸಕ್ಕೆ ಮೈಸೂರು ಮರ್ಕೆಂಟೈಲ್ ಕಂಪನಿ ಕಳೆದ ಐದು ವರ್ಷಗಳಿಂದಲೂ ಅಡ್ಡಿ ಪಡಿಸುತ್ತಿತ್ತು. ಜಲಸಂಪನ್ಮೂಲ ಸಚಿವರ ಸಂಧಾನದ ಮಾತುಕತೆ ಹಾಗೂ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಸಹಕಾರದೊಂದಿಗೆ ಮೈಸೂರು ಮರ್ಕೆಂಟೈಲ್ ಕಂಪನಿಯ ಜಮೀನಿನಲ್ಲಿ ಪೈಪ್ ಅಳವಡಿಕೆ ಪೂರ್ಣಗೊಳಿಸಲಾಯಿತು.

ಅದೇ ರೀತಿ, ಮೊದಲ ಹಂತದ ಏತ ಕಾಮಗಾರಿಯ ಪ್ಯಾಕೇಜ್ 5ರ ಕೆಲಸಗಳಿಗೆ ಮೂರು ವರ್ಷಗಳಿಂದ ಅಡ್ಡಿಪಡಿಸುತ್ತಿದ್ದ ಕಾಡುಮನೆ ಎಸ್ಟೇಟ್ ಅವರ ಮನವೊಲಿಸಿ, ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಇದ್ದ ಸಮಸ್ಯೆಗಳನ್ನು ಬಗೆಹರಿಸಿ ಕಾಮಗಾರಿ ಮುಂದುವರಿಯಲು ಪ್ರಮುಖ ಪಾತ್ರ ವಹಿಸಿದ್ದರು.

ಯೋಜನೆ ಹಂತ-2ರ ಗುರುತ್ವ ಕಾಲುವೆ ಕಾಮಗಾರಿಗೆ ಸಕಲೇಶಪುರ ತಾಲೂಕಿನ, ಬೆಳಗೂಡು ಹೋಬಳಿ ಮೂಗಲಿ ಗ್ರಾಮದ ಎಂ.ಪಿ. ಧೀರಜ್ ಬಿನ್ ಎಂ.ಪಿ ಪಾಲಾಕ್ಷರವರು ಅಡ್ಡಿಪಡಿಸಿದ್ದರು. ಇದರಿಂದ ಈ ಕಾಮಗಾರಿ 5 ವರ್ಷ ವಿಳಂಬವಾಗಿತ್ತು. ಈ ಸಮಸ್ಯೆಯನ್ನು ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಬಗೆಹರಿಸಿ ಕಾಮಗಾರಿಗೆ ವೇಗ ನೀಡಲಾಯಿತು.      ಆಲೂರು ತಾಲ್ಲೂಕು, ಪಾಳ್ಯ ಗ್ರಾಮದ ಜನರು ಕಾಮಗಾರಿಗೆ ಅಡ್ಡಿಪಡಿಸಿದಾಗಲೂ ಶಿವಕುಮಾರ್ ಅವರ ಸಲಹೆ ಸೂಚನೆ ಮೇರೆಗೆ ಗ್ರಾಮಸ್ಥರ ಸಮಸ್ಯೆಗಳನ್ನು ಪರಿಹರಿಸಿ ಕಾಮಗಾರಿ ಪೂರ್ಣಗೊಳಿಸಿದ್ದರು.

ಇಂತಹ ಪ್ರಗತಿಯ ಪಥವನ್ನು ಕ್ರಮಿಸುವಲ್ಲಿ ಸರ್ಕಾರಕ್ಕೆ ಇರುವ ಬದ್ದತೆ ಮತ್ತು ಇಚ್ಛಾಶಕ್ತಿ ಇತರ ರಾಜ್ಯಗಳಿಗೂ ಪ್ರೇರಣೆಯಾಗಿದೆ. ಸರ್ಕಾರದ ನಿರಂತರ ಶ್ರಮದ ಪ್ರತಿಫಲವೇ ಎತ್ತಿನ ಹೊಳೆ ಯೋಜನೆ. ಅತ್ಯಂತ ಮಹತ್ವಾಕಾಂಕ್ಷೆಯ ಈ ಎತ್ತಿನ‌ಹೊಳೆ ಯೋಜನೆಯ ಮೊದಲ ಹಂತದ ಕಾಮಗಾರಿ ಪೂರ್ಣಗೊಂಡು ನಾಡಿಗೆ  ಸಮರ್ಪಿಸುವ ಮೂಲಕ ಜನ ಜಾನುವಾರುಗಳಿಗೆ ಕುಡಿಯುವ ನೀರಿನ ತಾತ್ವಾರವನ್ನು ಶಾಶ್ವತವಾಗಿ ನೀಗಿಸುವಲ್ಲಿ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳ ಬದ್ದತೆಗೆ ಸಾಕ್ಷಿಯಾಗಿದೆ.

ಎತ್ತಿನ ಹೊಳೆ ಯೋಜನೆ: ರಾಜ್ಯದಲ್ಲಿ ಯಥೇಚ್ಛವಾಗಿರುವ ಜಲಸಂಪನ್ಮೂಲವನ್ನು ಜನರ ಕಲ್ಯಾಣ ಮತ್ತು ಅಭಿವೃದ್ಧಿಗೆ ಬಳಸಿಕೊಳ್ಳುವ ದೃಷ್ಟಿಯಿಂದ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಪಶ್ಚಿಮಘಟ್ಟದ ಮೇಲ್ಭಾಗದಲ್ಲಿ ಹರಿಯುವ ಎತ್ತಿನಹೊಳೆ, ಕಾಡುಮನೆಹೊಳೆಹೊಂಗದಹಳ್ಳ ಹಾಗೂ ಕೇರಿಹೊಳೆ ಹಳ್ಳಗಳ ಮುಂಗಾರು ಮಳೆ ಅವಧಿಯಲ್ಲಿ ದೊರೆಯಬಹುದಾದ ನೀರನ್ನು ಬಳಸಿಕೊಳ್ಳುವಲ್ಲಿ ಎತ್ತಿನ ಹೊಳೆ ಕುಡಿಯುವ ನೀರಿನ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗುತ್ತಿದೆ. ಯೋಜನೆಯ ಮೊದಲನೇ ಹಂತದ ಏತ (ಲಿಫ್ಟ್) ಮತ್ತು ವಿದ್ಯುತ್ ಪೂರೈಕೆಯ ಕಾಮಗಾರಿಗಳ ಅನುಷ್ಠಾನಕ್ಕೆ ಬಹುದಿನಗಳಿಂದ ಉದ್ಭವಿಸಿದ್ದ ಎಲ್ಲಾ ಅಡೆತಡೆಗಳನ್ನು ಈ ಸರ್ಕಾರವು ಕಳೆದ 18 ತಿಂಗಳಲ್ಲಿ ನಿವಾರಿಸಿಕೊಂಡು ಕಾಮಗಾರಿ ಪೂರ್ಣಗೊಳಿಸುವ ಮೂಲಕ ತನ್ನ ಇಚ್ಛಾಶಕ್ತಿಯನ್ನು ಪ್ರದರ್ಶಿಸಿದೆ.

ಎತ್ತಿನಹೊಳೆ, ಕಾಡುಮನೆಹೊಳೆ, ಹೊಂಗದಹಳ್ಳ ಹಾಗೂ ಕೇರಿಹೊಳೆ ಹಳ್ಳಗಳ ಪ್ರವಾಹದಿಂದ ಮುಂಗಾರಿನ ಅವಧಿಯಲ್ಲಿ ಪೂರ್ವಾಭಿಮುಖವಾಗಿ ತಿರುಗಿಸಿ, ದೊರೆಯಬಹುದಾದ ನೀರಿನ  ಪೈಕಿ 24.01 ಟಿ.ಎಂ.ಸಿ ನೀರನ್ನು ಇವುಗಳಿಗೆ ಅಡ್ಡಲಾಗಿ 8 ವಿಯರ್‌ಗಳನ್ನು ನಿರ್ಮಿಸಿ  ರಾಜ್ಯದ ಬರಪೀಡಿತ ಜಿಲ್ಲೆಗಳಾದ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರುಹಾಸನ ಹಾಗೂ ಚಿಕ್ಕಮಗಳೂರು   ಜಿಲ್ಲೆಗಳ 29 ತಾಲ್ಲೂಕಿನ 38 ಪಟ್ಟಣ ಪ್ರದೇಶದ ಹಾಗೂ 6657 ಗ್ರಾಮಗಳ ಸುಮಾರು 75.59 ಲಕ್ಷ ಜನರಿಗೆ ಮತ್ತು ಜಾನುವಾರುಗಳಿಗೆ ಕುಡಿಯುವ ನೀರು  ಒದಗಿಸುವ  ಮಹಾಸಂಕಲ್ಪವೊಂದು ಈ ಯೋಜನೆಯ ಮೂಲಕ ಈಡೇರುತ್ತಿರುವುದು ಈ ಜಿಲ್ಲೆಗಳ ಜನರ ಕುಡಿವ ನೀರಿನ ಸಮಸ್ಯೆಯನ್ನು ಇಂಗಿಸಿದೆ.

ಒಟ್ಟಾರೆ 24.01 ಟಿ.ಎಂ.ಸಿ ನೀರಿನಲ್ಲಿ ಕುಡಿಯುವ ನೀರಿಗಾಗಿ 14.056 ಟಿ.ಎಂ.ಸಿ, 527 ಕೆರೆ ತುಂಬಿಸಲು 9.953 ಟಿ.ಎಂ.ಸಿ ಬಳಸಿಕೊಳ್ಳುವ ಯೋಜನೆ ರೂಪಿಸಲಾಗಿದ್ದು, ರೂ. 23,251.66 ಕೋಟಿಗಳ ಅಂದಾಜು ಮೊತ್ತದ ಮೊದಲ ಹಂತದ ಕಾಮಗಾರಿಯನ್ನು ಜನರಿಗೆ ಸಮರ್ಪಿಸಲಾಗುತ್ತಿದೆ.

ಮೊದಲನೇ ಹಂತದ ಏತ (ಲಿಫ್ಟ್‌) ಮತ್ತು ವಿದ್ಯುತ್ ಪೂರೈಕೆಯ ಕಾಮಗಾರಿಗಳ ಅನುಷ್ಠಾನದಲ್ಲಿ ಬಹುದಿನಗಳಿಂದ ಉದ್ಭವಿಸಿದ್ದ ಅಡಚಣೆಗಳನ್ನು ನಿವಾರಿಸಿಕೊಂಡು ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದ್ದು, ಪ್ರಸ್ತುತ 1 ರಿಂದ 8 ವಿಯರ್ ಗಳಿಂದ ಒಟ್ಟಾರೆ 79.50 ಕ್ಯುಮೆಕ್ಸ್ (2800.00 ಕ್ಯೂಸೆಕ್ಸ್) ನೀರನ್ನೆತ್ತಿ ವಿತರಣಾ ತೊಟ್ಟಿ – 3ರ ವರೆಗೆ ಪೂರೈಸಿ ತದನಂತರ ವಿತರಣಾ ತೊಟ್ಟಿ-3 ರಿಂದ ನೀರನ್ನೆತ್ತಿ ವಿತರಣಾ ತೊಟ್ಟಿ –4 ರ ಮುಖಾಂತರ ಗುರುತ್ವ ಕಾಲುವೆಗೆ 79.50 ಕ್ಯುಮೆಕ್ಸ್ (2800.00 ಕ್ಯೂಸೆಕ್ಸ್) ನೀರನ್ನು ಹರಿಸಲು ಯೋಜಿಸಲಾಗಿದೆ.

ಗುರುತ್ವಕಾಲುವೆಯು ಒಟ್ಟು 252.61 ಕಿ.ಮೀ ಉದ್ದವಿದ್ದು, ಈ ಪೈಕಿ 164.47 ಕಿ.ಮೀ ಪೂರ್ಣಗೊಂಡಿದ್ದು, 25.87 ಕಿ.ಮೀ ಪ್ರಗತಿಯಲ್ಲಿರುತ್ತದೆ. ಗುರುತ್ವಕಾಲುವೆಯ ಒಟ್ಟು 42 ಕಿ.ಮೀ ವರಗಿನ ಕಾಮಗಾರಿಗಳು ಯಾವುದೇ ಅಡೆತಡೆಯಿಲ್ಲದೆ ಪೂರ್ಣಗೊಂಡಿದೆ. ನಂತರದ ಕಾಮಗಾರಿಗಳು ಅರಣ್ಯ ಮತ್ತು ಭೂಸ್ವಾಧೀನ ಸಮಸ್ಯೆಯಿಂದಾಗಿ ಪೂರ್ಣಗೊಂಡಿರದ ಕಾರಣ, ಗುರುತ್ವಕಾಲುವೆಯ 32.50 ಕಿ.ಮೀ ನಲ್ಲಿರುವ ನಾಲಾ ಎಸ್ಕೇಪ್ ಮೂಲಕ ಸುಮಾರು 132.50 ಕಿ.ಮೀ ದೂರದಲ್ಲಿರುವ ವಾಣಿ ವಿಲಾಸ ಸಾಗರಕ್ಕೆ ವೇದಾ ವ್ಯಾಲಿಯ ಮುಖಾಂತರ ತಾತ್ಕಾಲಿಕವಾಗಿ 1500 ಕ್ಯೂಸೆಕ್ಸ್‌ ನೀರನ್ನು ಹರಿಸಲು ಕಾರ್ಯಕ್ರಮ ರೂಪಿಸಲಾಗಿದೆ.

ಕಳೆದ ವರ್ಷದ ನವೆಂಬರ್‌ ನಿಂದಲೇ ಪೂರ್ವ ಪರಿಕ್ಷಾರ್ಥ ಚಾಲನಾ ಚಟುವಟಿಕೆಗಳನ್ನು ಕೈಗೊಳ್ಳಲಾಗಿದ್ದು, ವಿಯರ್- 4 ಮತ್ತು 5 ರಿಂದ ನೀರನ್ನೆತ್ತಿ ವಿತರಣಾ ತೊಟ್ಟಿ – 3 ರವರೆಗೆ ನೀರನ್ನು ಪೂರೈಸಲಾಗಿದೆ. ಪ್ರಸ್ತುತ ಇವುಗಳ ಜೊತೆ ವಿಯರ್ 1, 2 ಮತ್ತು 8ರಿಂದಲೂ ಸಹ ನೀರನ್ನೆತ್ತಿ ವಿತರಣಾ ತೊಟ್ಟಿ –4ರ ವರೆಗೆ ಪೂರೈಸಿ, ಅಲ್ಲಿಂದ ಗುರುತ್ವ ಕಾಲುವೆಗೆ ಕಳೆದ ಆ. 26 ರಂದು ಯಶಸ್ವಿಯಾಗಿ ನೀರು ಹರಿಸಲಾಗಿದ್ದು, ಗುರುತ್ವಕಾಲುವೆಯಲ್ಲಿನ ನೀರು 32.50 ಕಿ.ಮೀ ನಲ್ಲಿರುವ ನಾಲಾ ಎಸ್ಕೇಪ್ ಮೂಲಕ ವೇದಾ ವ್ಯಾಲಿಯನ್ನು ಪ್ರವೇಶಿಸಿ ಈಗಾಗಲೇ ಹಳೇಬೀಡು ಕೆರೆಯು ತುಂಬಿ ಕೋಡಿ ಬಿದ್ದು ತದನಂತರ ಬೆಳವಾಡಿ ಕೆರೆಯನ್ನುಪ್ರವೇಶಿಸಿದ್ದು ಇಲ್ಲಿಂದ ವಾಣಿ ವಿಲಾಸ ಸಾಗರದತ್ತ ನೀರು ಹರಿಯುತ್ತಿದೆ. ವಿಯರ್-3 ಅನ್ನು ಹೊರತುಪಡಿಸಿ, ಉಳಿದ ಎಲ್ಲಾ ವಿಯರ್‌ಗಳಿಂದ ಸೆಪ್ಟೆಂಬರ್‌ 6 ರಿಂದ ನೀರನ್ನೆತ್ತಿ ಗುರುತ್ವ ಕಾಲುವೆಗೆ ಪೂರೈಸಲಾಗುತ್ತಿದೆ.

ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನಯೋಜನೆಗಾಗಿ 2024ರ ಜುಲೈ ಅಂತ್ಯಕ್ಕೆ ರೂ.16,152.05  ಕೋಟಿಗಳ ಆರ್ಥಿಕ ಪ್ರಗತಿ ಸಾಧಿಸಲಾಗಿದೆ. ಯೋಜನೆ ಜಾರಿ ಬಗ್ಗೆ ಅನೇಕ ಟೀಕೆ, ಅನುಮಾನಗಳು ವ್ಯಕ್ತವಾದರೂ ಈ ಯೋಜನೆಯನ್ನು 2026-27ನೇ ಸಾಲಿನ ಮಾರ್ಚ್‌ ಅಂತ್ಯಕ್ಕೆ ಆದ್ಯತೆ ಮೇರೆಗೆ ಪೂರ್ಣಗೊಳಿಸಲು ಸರ್ಕಾರ ಕಾರ್ಯೋನ್ಮುಖವಾಗಿದೆ.

ಪ್ರಸ್ತುತ ಸಮಗ್ರ ಕುಡಿಯುವ ನೀರಿನ ಯೋಜನೆಯ ಹಂತ-1 ರ ಕಾಮಗಾರಿಗಳ ಉದ್ಘಾಟನಾ ಸಮಾರಂಭವನ್ನು ಗೌರಿ ಹಬ್ಬದಂದು (ಸೆ. 6) ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರುಗಳು ನೇರವೇರಿಸಲಿದ್ದಾರೆ. ಈ ಮೂಲಕ ರಾಜ್ಯದ ಬರಪೀಡಿತ ಜಿಲ್ಲೆಗಳಾದ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರುಹಾಸನ ಹಾಗೂ ಚಿಕ್ಕಮಗಳೂರು   ಜಿಲ್ಲೆಗಳ ಜನ ಜಾನುವಾರುಗಳಿಗೆ ಗೌರಿ-ಗಣೇಶ ಹಬ್ಬದ ಸಂಭ್ರಮಕ್ಕೆ ಗಂಗಮ್ಮನೂ ಸೇರಿ ಕುಡಿವ ನೀರಿನ ಸುಧೆಯನ್ನು ಹರಿಸಲಿದ್ದಾಳೆ.
ಬಾ ತಾಯಿ ಬಾ ತಾಯಿ
ಬಾರವ್ವ ಬಾ ತಾಯಿ
ಗಂಗವ್ವ ತಾಯಿ*

 

 

- Advertisement -  - Advertisement -  - Advertisement - 
Share This Article
error: Content is protected !!
";