ನಾಳೆ ಪ್ರತಿಭಾ ಪುರಸ್ಕಾರ, ವಧೂ-ವರರ ಸಮಾವೇಶ, ರಕ್ತದಾನ ಶಿಬಿರ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಭೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿಯವರ ೧೬ನೇ ಪಟ್ಟಾಭಿಷೇಕ ಮಹೋತ್ಸವ ಹಾಗೂ ೨೭ನೇ ಲಾಂಛನ ದೀಕ್ಷಾ ಮಹೋತ್ಸವ, ೪೦ನೇ ವಸಂತೋತ್ಸವದ ನಿಮಿತ್ತ ಪ್ರತಿಭಾ ಪುರಸ್ಕಾರ, ವಧೂ-ವರರ ಸಮಾವೇಶ, ರಕ್ತದಾನ ಶಿಬಿರವನ್ನು ಜು-೧೮ ೨೦೨೫ ರಂದು ಚಿತ್ರದುರ್ಗದ ಭೋವಿ ಗುರುಪೀಠದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಭೋವಿ ಸಂಘದ ಅಧ್ಯಕ್ಷ ಚಿಕ್ಕಂದವಾಡಿ ತಿಪ್ಪೇಸ್ವಾಮಿ ಹೇಳಿದರು.

- Advertisement - 

ಪತ್ರಿಕಾ ಭವನದಲ್ಲಿ ಏರ್ಪಡಿಸಲಾಗಿದ್ದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿಯವರ ಅವಿರತ ಶ್ರಮದಿಂದ ಭೋವಿ ಗುರುಪೀಠ ಪ್ರಗತಿ ಪಥದಲ್ಲಿ ಮುನ್ನಡೆಯುತ್ತಿದ್ದು, ದೀಕ್ಷಾ ಮಹೋತ್ಸವ ಹಾಗೂ ಪಟ್ಟಾಭಿಷೇಕ ಕಾರ್ಯಕ್ರಮಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಶಿವರಾಜ್ ತಂಗಡಗಿ, ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್, ಕಾರ್ಮಿಕ ಸಚಿವರಾದ ಸಂತೋಷ್ ಲಾಡ್,

- Advertisement - 

ಮಾಜಿ ಸಚಿವರಾದ ಅರವಿಂದ ಲಿಂಬಾವಳಿ, ವಿಧಾನಪರಿಷತ್ತಿನ ವಿರೋಧ ಪಕ್ಷದ ಉಪನಾಯಕರಾದ ಸುನೀಲ್ ವಲ್ಯಾಪುರ, ಹೊಳಲ್ಕೆರೆ ಶಾಸಕರಾದ ಡಾ.ಎಂ.ಚಂದ್ರಪ್ಪ, ಬೆಂಗಳೂರಿನ ಶ್ರೀ.ಸಿ.ವಿ.ರಾಮನ್ ನಗರದ ಶಾಸಕ ಎಸ್.ರಘು, ಲಿಂಗಸೂರು ಶಾಸಕರಾದ ಮಾನಪ್ಪ ವಜ್ಜಲ್, ಬೆಂಗಳೂರು ಪುಲಿಕೇಶಿ ನಗರ ಶಾಸಕ ಎ.ಸಿ.ಶ್ರೀನಿವಾಸ್, ಪಾವಗಡ ಶಾಸಕ ವೆಂಕಟೇಶ್ ವಿ., ಬೆಂಗಳೂರು ಮಹದೇವಪುರ ಕ್ಷೇತ್ರದ ಶಾಸಕ ಶ್ರೀಮತಿ ಮಂಜುಳಾ ಲಿಂಬಾವಳಿ, ಕೊಲಾರ ಸಂಸದ ಮಲ್ಲೇಶ್‌ಬಾಬು, ಎಂ.ಎಲ್.ಸಿ.ಕೆ.ಎಸ್.ನವೀನ್, ಡಿ.ಟಿ.ಶ್ರೀನಿವಾಸ್.

ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯುವ ಜನ ಪ್ರಾಧಿಕಾರದ ಅಧ್ಯಕ್ಷ ವಿ.ಶಾಂತಕುಮಾರ್, ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರವಿಕುಮಾರ್, ಓ.ಸಿ.ಸಿ.ಐ. ರಾಷ್ಟ್ರೀಯ ಅಧ್ಯಕ್ಷ ಹೆಚ್.ರವಿ ಮಾಕಳಿ, ರಾಜ್ಯಾಧ್ಯಕ್ಷ ಹೆಚ್.ಆನಂದಪ್ಪ, ಮಾಜಿ ಸಚಿವರಾದ ವೆಂಕಟರಮಣಪ್ಪ, ಗೂಳಿಹಟ್ಟಿ ಡಿ.ಶೇಖರ್, ಮಾಜಿ ಸಂಸದ ಜನಾರ್ಧನಸ್ವಾಮಿ, ಮಾಜಿ ಶಾಸಕರಾದ ಬಂಗಾರಪೇಟೆಯ ನಾರಾಯಣಸ್ವಾಮಿ, ನೆಲಮಂಗಲ ಎಂ.ವಿ.ನಾಗರಾಜು, ಲಿಂಗಸೂರಿನ ಡಿ.ಎಸ್.ಹಲಗೇರಿ,

- Advertisement - 

ಬೆಂಗಳೂರು ಪುಲಕೇಶಿನಗರದ ಮಾಜಿ ಶಾಸಕ ಅಖಂಡ ಶ್ರೀನಿವಾಸಮೂರ್ತಿ, ಬೆಳಗಾವಿ ಬಾಳಾಸಾಹೇಬವಡ್ಡರ, ಭೋವಿ ನಿಗಮದ ಮಾಜಿ ಅಧ್ಯಕ್ಷಾರದ ಜಿ.ವಿ.ಸೀತಾರಾಮ್, ಜಿಲ್ಲೆಯ ಶಾಸಕರಾದ ಕೆ.ಸಿ.ವೀರೇಂದ್ರ ಪಪ್ಪಿ, ಟಿ.ರಘುಮೂರ್ತಿ, ಬಿ.ಜಿ.ಗೋವಿಂದಪ್ಪ, ಎನ್.ವೈ.ಗೋಪಾಲಕೃಷ್ಣ, ನಿವೃತ್ತ ಐ.ಎ.ಎಸ್. ಅಧಿಕಾರಿಗಳಾದ ಮಂಜುನಾಥ ಪ್ರಸಾದ್, ಎಸ್.ಎಲ್.ಗಂಗಾಧರಪ್ಪ, ಭೀಮಯ್ಯ ಮುಂತಾದವರು ಭಾಗವಹಿಸಲಿದ್ದಾರೆ.

ಇದೆ ಸಂದರ್ಭದಲ್ಲಿ ಐನೂರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ೨೫ ಲಕ್ಷಕ್ಕೂ ಹೆಚ್ಚು ಪ್ರೋತ್ಸಾಹಧನ ವಿತರಿಸಲಾಗುತ್ತದೆ ಎಂದು ಚಿಕ್ಕಂದವಾಡಿ ತಿಪ್ಪೇಸ್ವಾಮಿ ಮಾಹಿತಿ ನೀಡಿದರು. ಪತ್ರಿಕಾ ಗೋಷ್ಟಿಯಲ್ಲಿ ಪ್ರಧಾನ ಕಾರ್ಯದರ್ಶಿ ಹೆಚ್.ಲಕ್ಷ್ಮಣ್, ಹೊಳಲ್ಕೆರೆ ತಾಲ್ಲೂಕು ಅಧ್ಯಕ್ಷರಾದ ಡಿ.ಸಿ.ಮೋಹನ್, ಚಳ್ಳಕೆರೆ ತಾಲ್ಲೂಕು ಅಧ್ಯಕ್ಷರಾದ ಹೆಚ್.ಆಂಜನೇಯ, ಶ್ರೀ ಭೋವಿ ಗುರುಪೀಠದ ಕಾರ್ಯನಿರ್ವಹಣಾಧಿಕಾರಿಗಳಾದ ಗೌನಹಳ್ಳಿ ಗೋವಿಂದಪ್ಪ, ನಿರ್ದೇಶಕರಾದ ಟಿ.ದೇವರಾಜ್, ಡಾ.ತಿಮ್ಮಣ್ಣ, ಪ್ರಕಾಶ್ ವೆಂಕಟಪತಿ ಮುಂತಾದವರು ಹಾಜರಿದ್ದರು.

 

Share This Article
error: Content is protected !!
";