ಫೆ.24ರಂದು ಮಕ್ಕಳ ಹಕ್ಕುಗಳ ಆಯೋಗದ ಸದಸ್ಯರ ಪ್ರವಾಸ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಡಾ.ಕೆ.ಟಿ.ತಿಪ್ಪೇಸ್ವಾಮಿ ಅವರು ಇದೇ ಫೆ.24ರಂದು ಚಿತ್ರದುರ್ಗ  ಜಿಲ್ಲಾ ಪ್ರವಾಸ  ಹಮ್ಮಿಕೊಂಡಿದ್ದಾರೆ.

      ಫೆ.24ರಂದು ಬೆಳಿಗ್ಗೆ ತುಮಕೂರಿನಿಂದ ಹೊರಟು ಚಿತ್ರದುರ್ಗಕ್ಕೆ  ಆಗಮಿಸಿ, ಬೆಳಿಗ್ಗೆ 11ಕ್ಕೆ ನಗರದ ಜಿಲ್ಲಾ ಬಾಲಭವನ ಸಭಾಂಗಣದಲ್ಲಿ ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ-2009ರ ಅನುಷ್ಠಾನದ ಕುರಿತು ಶಿಕ್ಷಣ ಇಲಾಖೆಯ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸುವರು.

           ಮಧ್ಯಾಹ್ನ 3ಕ್ಕೆ ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ನೀತಿ-2016 ಮತ್ತು ಮಕ್ಕಳ ಸ್ನೇಹಿ ಸಾರಿಗೆ ವ್ಯವಸ್ಥೆ ಕುರಿತು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧಿಕಾರಿಗಳೊಂದಿಗೆ ಸಭೆ ನಡೆಸುವರು. ನಂತರ ಸಂಜೆ 6ಕ್ಕೆ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸಿ.ಸವಿತಾ ತಿಳಿಸಿದ್ದಾರೆ.

 

Share This Article
error: Content is protected !!
";