ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ಸರ್ಕಾರದ ದೃಷ್ಟಿಕೋನವನ್ನು ಸಾಧಿಸುವ ಉದ್ದೇಶದಿಂದ ಪ್ರವಾಸೋದ್ಯಮ ನೀತಿ 2024-2029 ಅನ್ನು ರೂಪಿಸಲಾಗಿದೆ. ಪ್ರವಾಸೋದ್ಯಮ ಕ್ಷೇತ್ರದಲ್ಲಿ ಹೂಡಿಕೆಯನ್ನು ಸುಗಮಗೊಳಿಸಲು ಕಾರ್ಯತಂತ್ರದ ಮಧ್ಯಸ್ಥಿಕೆಗಳು, ಆಕರ್ಷಕ ಪ್ರೋತ್ಸಾಹಗಳು ಮತ್ತು ಅಗತ್ಯ ನಿಯಂತ್ರಕ ಸುಧಾರಣೆಗಳನ್ನು ನೀತಿಯು ಪ್ರಸ್ತಾಪಿಸುತ್ತದೆ. ಆರಾಮದಾಯಕ ಮತ್ತು ಸುಸ್ಥಿರ ಪ್ರವಾಸೋದ್ಯಮ ಪರಿಸರ ವ್ಯವಸ್ಥೆಯನ್ನು ಸೃಷ್ಟಿಸುವತ್ತ ನಿರಂತರವಾಗಿ ಶ್ರಮಿಸುತ್ತಿರುವ ಈ ನೀತಿಯು ಪ್ರವಾಸಿಗರಿಗೆ ಸುರಕ್ಷಿತ ಮತ್ತು ಉತ್ತಮ-ಗುಣಮಟ್ಟದ ಅನುಭವವನ್ನು ಮತ್ತು ಕರ್ನಾಟಕದ ಜನರಿಗೆ ಹೆಚ್ಚಿನ ಸಮೃದ್ಧಿ ಮತ್ತು ಸಂತೋಷವನ್ನು ಒದಗಿಸುವತ್ತ ಒತ್ತು ನೀಡುತ್ತದೆ.
ಗದಗ ಜಿಲ್ಲೆ ಲಕ್ಕುಂಡಿ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರಾಚ್ಯಾವಶೇಷಗಳ ಸಂಗ್ರಹಣಾ ಅಭಿಯಾನದಲ್ಲಿ ಸಂಗ್ರಹಿಸಲಾದ 1000ಕ್ಕೂ ಹೆಚ್ಚು ಪ್ರಾಚ್ಯಾವಶೇಷಗಳನ್ನು ಸಾರ್ವಜನಿಕರ ವೀಕ್ಷಣೆ, ಅಧ್ಯಯನ ಮತ್ತು ಸಂಶೋಧನೆಗಾಗಿ ಅಂತರರಾಷ್ಟ್ರೀಯ ಮಟ್ಟದ ಬಯಲು ವಸ್ತು ಸಂಗ್ರಹಾಲಯ ನಿರ್ಮಿಸಲು ಉದ್ದೇಶಿಸಿದೆ.
ಸವದತ್ತಿ ಯಲ್ಲಮ್ಮ ಕ್ಷೇತ್ರದಲ್ಲಿ ಸಕಲ ಸೌಲಭ್ಯಗಳನ್ನು ಒದಗಿಸಲು ದಾಪುಗಾಲನ್ನಿಡಲಾಗಿದೆ. ಈ ಕ್ಷೇತ್ರದಲ್ಲಿ ಭಕ್ತರು ದೇವಿಯ ದರ್ಶನವನ್ನು ಸುಗಮವಾಗಿ ಮಾಡಲು ಅನುಕೂಲವಾಗುವಂತೆ ತಿರುಪತಿ ಮಾದರಿಯಲ್ಲಿ ಸರದಿ ಸಾಲಿನ ಸಂಕೀರ್ಣವನ್ನು (ಕ್ಯೂ ಕಾಂಪ್ಲೆಕ್ಸ್) ಆದ್ಯತೆಯ ಮೇಲೆ ನಿರ್ಮಾಣ ಮಾಡಲು ಮತ್ತು ಭಕ್ತಾದಿಗಳು ಸ್ವತ: ಅಡುಗೆ ಮಾಡಿಕೊಳ್ಳುವುದರಿಂದ ಅಲ್ಲಿ 500 ಚಿಕ್ಕ ಹೊರವಲಯದ ಅಡುಗೆ ಮನೆಗಳನ್ನು ಮತ್ತು ಗೌರವ ಘಟಕ (ಶೌಚಾಲಯ) ಗಳನ್ನು ನಿರ್ಮಿಸಲು ರೂ.200 ಕೋಟಿಗಳ ಅಂದಾಜು ವೆಚ್ಚದ ಮಾಸ್ಟರ್ ಫ್ಲ್ಯಾನ್ ಸಿದ್ಧಪಡಿಸಲಾಗುತ್ತಿದೆ. ಸವದತ್ತಿ ಯಲ್ಲಮ್ಮ ಗುಡ್ಡಕ್ಕೆ ರೋಪ್-ವೇ ನಿರ್ಮಾಣ ಮಾಡಲು ಪ್ರಸ್ತಾಪಿಸಲಾಗಿದೆ.
ದೇವಿಕಾ ರಾಣಿ ನಿಕೋಲಾಸ್ರೋರಿಚ್572 ಎಕರೆ ಎಸ್ಟೇಟ್ ಅನ್ನು ಪ್ರವಾಸಿಗರ ಆಕರ್ಷಣೆಗೆ ಮತ್ತು ವಿಶ್ವದರ್ಜೆಯ ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳಲಾಗುವುದು. ಕೇಂದ್ರ ಸರ್ಕಾರದ SಂSಅI ಯೋಜನೆಯಡಿಯಲ್ಲಿ ರೂ.100 ಕೋಟಿಗಳ ಅನುದಾನವನ್ನು ಬಳಕೆ ಮಾಡಿಕೊಳ್ಳುವುದರ ಜೊತೆಗೆ ಕರ್ನಾಟಕ ಸರ್ಕಾರವು ಸಹ ತನ್ನ ವಿಶೇಷ ಅನುದಾನದ ಮೂಲಕ ಈ ಪ್ರದೇಶವನ್ನು ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳುತ್ತದೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದರು.