ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯ ಕಾಂಗ್ರೆಸ್ ಸರ್ಕಾರದ ಕರಾವಳಿ ಪ್ರದೇಶ ಅಭಿವೃದ್ಧಿಯ ಫಲವಾಗಿ ಕರ್ನಾಟಕ ಪ್ರವಾಸೋದ್ಯಮದ ಕೇಂದ್ರ ಬಿಂದುವಾಗುತ್ತಿದೆ ಎಂದು ಕಾಂಗ್ರೆಸ್ ತಿಳಿಸಿದೆ.
ಗೋವಾ ಬಿಟ್ಟು ರಾಜ್ಯದ ಕರಾವಳಿ ಭಾಗಕ್ಕೆ ಪ್ರವಾಸಿಗರು ಮುಖ ಮಾಡಿದ್ದಾರೆ. ಅದರಲ್ಲೂ ವಿದೇಶಿ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಏರಿಕೆಯಾಗಿದೆ.
ಸ್ಟಾರ್ಟ್ಅಪ್‌ಗಳೊಂದಿಗಿನ ಒಪ್ಪಂದಗಳಿಂದ ಹಿಡಿದು ಸಿಆರ್ಝಡ್ ಕಾರ್ಯಕ್ರಮಗಳು ಮತ್ತು ಸಾಹಸ ಪ್ರವಾಸೋದ್ಯಮದವರೆಗೆ, ರಾಜ್ಯ ಕಾಂಗ್ರೆಸ್ ಸರ್ಕಾರ ಪ್ರವಾಸೋದ್ಯಮ ಅಭಿವೃದ್ಧಿಗೆ ಹಲವು ಯೋಜನೆಗಳನ್ನು ರೂಪಿಸಿ ಕಾರ್ಯಗತಗೊಳಿಸುತ್ತಿದೆ ಎಂದು ಕಾಂಗ್ರೆಸ್ ತಿಳಿಸಿದೆ.

