ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಡಿ.21 ರಂದು ನಡೆಯಲಿದ್ದು, ಇಂದು 33 ನಾಮಪತ್ರಗಳು ಸಲ್ಲಿಕೆಯಾಗಿವೆ.
ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯಲ್ಲಿ 19 ವಾರ್ಡುಗಳಿವೆ. 1ರಿಂದ 10ನೇ ವಾರ್ಡ್‌ವರೆಗೆ ಬಾಶೆಟ್ಟಿಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಾಮಪತ್ರ ಸಲ್ಲಿಸಲು ಹಾಗೂ 11 ರಿಂದ 19 ನೇ ವಾರ್ಡ್‌ವರೆಗೆ ಅಂಬೇಡ್ಕರ್ ಭವನದಲ್ಲಿ ನಾಮಪತ್ರ ಸಲ್ಲಿಸಲು ವ್ಯವಸ್ಥೆ ಮಾಡಲಾಗಿದೆ.
ಡಿ.9 ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನ. ಡಿ.10 ನಾಮಪತ್ರಗಳನ್ನು ಪರಿಶೀಲನೆ. ಡಿ. 12 ರಂದು ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿರುತ್ತದೆ.

