ಪಟ್ಟಣ ಪಂಚಾಯಿತಿ ಸಾರ್ವತ್ರಿಕ ಚುನಾವಣೆ ಹಾಗೂ ವಾರ್ಡ್-21ಕ್ಕೆ ಉಪಚುನಾವಣೆ

News Desk
- Advertisement -  - Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸಾರ್ವತ್ರಿಕ ಚುನಾವಣೆ ಹಾಗೂ ದೊಡ್ಡಬಳ್ಳಾಪುರ ನಗರಸಭೆಯ ವಾರ್ಡ್ ನಂಬರ್ 21ರ ಹೇಮಾವತಿ ಪೇಟೆಗೆ ಉಪಚುನಾವಣೆ ಸಂಬಂಧ ಡಿಸೆಂಬರ್ 24 ರಂದು ಮತ ಎಣಿಕೆ ಕಾರ್ಯ ನಡೆಯಲಿದ್ದು ಮತ ಎಣಿಕೆ ಕಾರ್ಯವು ಸುಗಮವಾಗಿ
,

ಶಾಂತಿಯುತವಾಗಿ ನಡೆಯುವ ಸದುದ್ದೇಶದಿಂದ ಮತ್ತು ಮತದಾನದ ಪಾವಿತ್ರ್ಯತೆ ಕಾಪಾಡುವ ಹಿತದೃಷ್ಟಿಯಿಂದ ಮತ ಎಣಿಕೆ ಕೇಂದ್ರವಾದ ದೊಡ್ಡಬಳ್ಳಾಪುರ ಟೌನ್ ನ ಇಸ್ಲಾಂಪುರ ಮುಖ್ಯ ರಸ್ತೆಯಲ್ಲಿರುವ ಶ್ರೀ ಕೊಂಗಾಡಿಯಪ್ಪ ಪ್ರೌಢಶಾಲೆ ವ್ಯಾಪ್ತಿಯಲ್ಲಿ ಡಿಸೆಂಬರ್ 23 ರ ಸಂಜೆ 05.00 ಗಂಟೆಯಿಂದ ಡಿ.24 ರ ರಾತ್ರಿ 12 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಎ.ಬಿ ಬಸವರಾಜು ಅವರು ಆದೇಶಿಸಿದ್ದಾರೆ.

- Advertisement - 

 ನಿಷೇಧಾಜ್ಞೆ ಅವಧಿಯಲ್ಲಿ ಮತ ಎಣಿಕೆ ಕೇಂದ್ರವಾದ ದೊಡ್ಡಬಳ್ಳಾಪುರದ ಇಸ್ಲಾಂಪುರ ಮುಖ್ಯ ರಸ್ತೆಯಲ್ಲಿ ಇರುವ ಶ್ರೀ ಕೊಂಗಾಡಿಯಪ್ಪ ಪ್ರೌಢಶಾಲೆ ವ್ಯಾಪ್ತಿಯಲ್ಲಿ ಐದಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಮೆರವಣಿಗೆ ಅಥವಾ ಸಭೆ ಸಮಾರಂಭಗಳನ್ನು ಜರುಗಿಸುವುದನ್ನು ನಿಷೇಧಿಸಿದೆ. ಮತ ಎಣಿಕೆ ಕೇಂದ್ರ ವ್ಯಾಪ್ತಿಯಲ್ಲಿ ಡಿಸೆಂಬರ್ 23 ರಂದು ಸಂತೆ, ಜಾತ್ರೆಗಳನ್ನು ನಿಷೇಧಿಸಿದೆ.

ಅಪಾಯವನ್ನು ಉಂಟು ಮಾಡಬಹುದಾದ ಯಾವುದೇ ಮಾರಕಾಸ್ತ್ರಗಳನ್ನು ಹಾಗೂ ಸ್ಫೋಟಕ ವಸ್ತುಗಳನ್ನು ಕೊಂಡೊಯ್ಯುವುದನ್ನು ಪ್ರತಿಬಂಧಿಸಿದೆ. ಈ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಬಳಸುವಂತಿಲ್ಲ. ಮತ ಎಣಿಕೆ ಕೇಂದ್ರದ ವ್ಯಾಪ್ತಿಯಲ್ಲಿ ಪೂರ್ವ ನಿಯೋಜಿತ ಮದುವೆ, ಧಾರ್ಮಿಕ ಕಾರ್ಯಕ್ರಮ, ಮೆರವಣಿಗೆಗಳನ್ನು ಮತ್ತು

- Advertisement - 

ಶವ ಸಂಸ್ಕಾರಗಳನ್ನು ಚುನಾವಣಾ ನೀತಿ ಸಂಹಿತ ಉಲ್ಲಂಘನೆ ಆಗದಂತೆ ಹಾಗೂ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರದಂತೆ ನಡೆಸುವುದು. ಮತ ಎಣಿಕೆ ಕೇಂದ್ರ ವ್ಯಾಪ್ತಿಯಲ್ಲಿ ಎಣಿಕೆ ಕಾರ್ಯ ಆದ ನಂತರ ಪಟಾಕಿ ಹೊಡೆಯುವುದು ನಿಷೇಧಿಸಿದೆ ಮತ್ತು ಚುನಾವಣಾ ಅಭ್ಯರ್ಥಿಗಳ ವಿಜಯೋತ್ಸವವನ್ನು ಆಚರಿಸುವುದು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

Share This Article
error: Content is protected !!
";