ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಬಿಜೆಪಿ ಆಡಳಿತದ ಅವಧಿಯಲ್ಲಿ ಬಂಡವಾಳ ಹೂಡಿಕೆಯಲ್ಲಿ ಕರ್ನಾಟಕ ದೇಶದಲ್ಲೇ ನಂಬರ್ಒನ್ಸ್ಥಾನದಲ್ಲಿತ್ತು. ಇದೀಗ ಆ ಸ್ಥಾನವನ್ನು ಭ್ರಷ್ಟ ಕರ್ನಾಟಕ ಕಾಂಗ್ರೆಸ್ ಸರ್ಕಾರ ಮಹಾರಾಷ್ಟ್ರಕ್ಕೆ ಬಿಟ್ಟು ಕೊಡುತ್ತಿದೆ.
ಜತೆಗೆ 21 ಸಾವಿರ ಕೋಟಿ ರೂ.ಗಳ ಬೃಹತ್ಉದ್ಯಮವನ್ನು ಕೈ ಚೆಲ್ಲಿದೆ ಎಂದು ಬಿಜೆಪಿ ಗಂಭೀರ ಆರೋಪ ಮಾಡಿದೆ.
ಮುಷ್ಕರ, ಪ್ರತಿಭಟನೆ, ಮೂಲಭೂತ ಸೌಕರ್ಯಗಳ ಕೊರತೆ, ಟ್ರಾಫಿಕ್ಸಮಸ್ಯೆ, ಭ್ರಷ್ಟ ಸಿದ್ದರಾಮಯ್ಯ ಸರ್ಕಾರದ ಕಿರಿಕಿರಿಯಿಂದಾಗಿ ಟೊಯೋಟಾ ಕಿರ್ಲೋಸ್ಕರ್ಸಂಸ್ಥೆ ಮೂರನೇ ಹಂತದ ಉತ್ಪಾದನಾ ಘಟಕವನ್ನು ಕರ್ನಾಟಕದ ಬದಲಿಗೆ ಮಹಾರಾಷ್ಟ್ರದಲ್ಲಿ ಸ್ಥಾಪಿಸುತ್ತಿದೆ.
ಕಾಂಗ್ರೆಸ್ಸರ್ಕಾರದ ದುರಾಡಳಿತದ ಪರಿಣಾಮ ಸಾವಿರಾರು ಕನ್ನಡಿಗರು ಉದ್ಯೋಗ ಅವಕಾಶದಿಂದ ವಂಚಿತರಾಗಿದ್ದಾರೆ. ಸರ್ಕಾರದ ಬೊಕ್ಕಸಕ್ಕೂ ಕತ್ತರಿ ಬಿದ್ದಿದೆ ಎಂದು ಬಿಜೆಪಿ ಕಿಡಿ ಕಾರಿದೆ.