ಬ್ಯಾಂಕಿಂಗ್ ಹುದ್ದೆಗಳ ನೇಮಕಾತಿ ಪರೀಕ್ಷೆಗಳ ತರಬೇತಿ ಶಿಬಿರ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಜನವರಿ 29ರಂದು ಬೆಳಿಗ್ಗೆ 11 ಗಂಟೆಗೆ ಮೈಸೂರಿನ ಮುಕ್ತಗಂಗೋತ್ರಿಯ ಕಾವೇರಿ ಸಭಾಂಗಣದಲ್ಲಿ ಬ್ಯಾಂಕಿಂಗ್ ಹುದ್ದೆಗಳ ನೇಮಕಾತಿ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಮಂಡ್ಯ ಜಿಲ್ಲೆಯ ಜಿಲ್ಲಾಧಿಕಾರಿ ಡಾ. ಕುಮಾರ್ ನೆರವೇರಿಸಲಿರುವರು. ಮೈಸೂರು ಜಿಲ್ಲಾ ಪೊಲೀಸ್ ಅಧೀಕ್ಷಕ ಶಿಬಿರಾರ್ತಿಗಳಿಗೆ ಶುಭ ಹಾರೈಕೆ ಮಾಡಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆ ಕರ್ನಾಟಕ ಮುಕ್ತ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಶರಣಪ್ಪ ವಿ. ಹಲಸೆ ವಹಿಸಲಿರುವರು.

ಕಾರ್ಯಕ್ರಮದಲ್ಲಿ ವ್ಯವಸ್ಥಾಪನಾ ಮಂಡಳಿಯ ಸದಸ್ಯರು ಹಾಗೂ ಶಾಸನಬದ್ಧ ಅಧಿಕಾರಿಗಳು ಉಪಸ್ಥಿತರಿರುವರು ಎಂದು ಸಂಯೋಜನಾಧಿಕಾರಿ ಜೈನಹಳ್ಳಿ ಸತ್ಯನಾರಾಯಣಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

- Advertisement -  - Advertisement -  - Advertisement - 
Share This Article
error: Content is protected !!
";