ಬ್ಯಾಂಕಿಂಗ್ ಮತ್ತು ಕೇಂದ್ರ ಸರ್ಕಾರದ ಹುದ್ದೆಗಳ ನೇಮಕಾತಿಗೆ ತರಬೇತಿ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರವು ಬ್ಯಾಂಕಿಂಗ್  ಮತ್ತು ಕೇಂದ್ರ ಸರ್ಕಾರದ ಹುದ್ದೆಗಳ ನೇಮಕಾತಿ ಪರೀಕ್ಷೆಗಳಿಗೆ 50 ದಿನಗಳ ವಿಶೇಷ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಿದೆ.

ಈ ತರಬೇತಿಯು ಪದವೀಧರರಿಗೆ ಪರೀಕ್ಷೆಗಳನ್ನು ಯಶಸ್ವಿಯಾಗಿ ಎದುರಿಸಲು ಅಗತ್ಯವಾದ ಎಲ್ಲಾ ಕೌಶಲ್ಯ ಮತ್ತು ಜ್ಞಾನವನ್ನು ಒದಗಿಸುತ್ತದೆ. ಆಸಕ್ತರು ಅಕ್ಟೋಬರ್ 10 ರೊಳಗಾಗಿ ಮೈಸೂರಿನಲ್ಲಿರುವ

- Advertisement - 

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದಲ್ಲಿ ತಮ್ಮ ಹೆಸರನ್ನು ಬೆಳಿಗ್ಗೆ 10 ರಿಂದ ಸಂಜೆ 4:00 ಗಂಟೆಯೊಳಗಾಗಿ ನೋಂದಾಯಿಸಿಕೊಳ್ಳಲು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕುಲಸಚಿವ ಪ್ರೊ. ಎಸ್.ಕೆ. ನವೀನ್‍ಕುಮಾರ್ ತಿಳಿಸಿದ್ದಾರೆ.

ಹೆಚ್ಚಿನ ವಿವರಗಳಿಗಾಗಿ ದೂರವಾಣಿ ಸಂಖ್ಯೆ : 0821-2515944 / 9964760090 ಅನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

- Advertisement - 

 

 

 

 

Share This Article
error: Content is protected !!
";