ಯುಜಿಸಿ-ನೆಟ್ ಮತ್ತು ಕೆ-ಸೆಟ್ ಪರೀಕ್ಷೆಗಳಿಗೆ ತರಬೇತಿ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ನಡೆಸಲಿರುವ ರಾಜ್ಯಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ (ಕೆಸೆಟ್) ಹಾಗೂ

ನವದೆಹಲಿಯ ವಿಶ್ವವಿದ್ಯಾನಿಲಯ ಧನಸಹಾಯ ಆಯೋಗದವರು ನಡೆಸಲಿರುವ ರಾಷ್ಟ್ರಮಟ್ಟದ ಕಾಲೇಜು ಸಹಾಯಕ ಪ್ರಾಧ್ಯಾಪಕರ (ಯುಜಿಸಿನೆಟ್) ಮತ್ತು ಕಿರಿಯ ಶಿಷ್ಯ ವೇತನ ಸಂಶೋಧನಾ ಸಹಾಯಕರ (ಜೆಆರ್‍ಎಫ್) ಪರೀಕ್ಷೆಗಳಿಗೆ 45 ದಿನಗಳ ತರಬೇತಿಯನ್ನು ಮೈಸೂರಿನ ಕೇಂದ್ರದಲ್ಲಿ ನೀಡಲು ನಿರ್ಧರಿಸಲಾಗಿದೆ.

- Advertisement - 

ಆಸಕ್ತರು ಇದೇ ಜೂನ್ 30 ರೊಳಗಾಗಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ರವರೆಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಲು 0821-2515944 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಕುಲಸಚಿವ ಪ್ರೊ.ಎಸ್.ಕೆ.ನವೀನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

- Advertisement - 

Share This Article
error: Content is protected !!
";