ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಡಿಜಿಟಲ್ ಇ ಸ್ಟ್ಯಾಂಪ್ ವ್ಯವಸ್ಥೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಸಲುವಾಗಿ ಜಿಲ್ಲೆಯ ಎಲ್ಲಾ ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ಗ್ರಾಮ ಒನ್ ಹಾಗೂ ಬಾಪೂಜಿ ಸೇವಾ ಕೇಂದ್ರ,
SCHILL ಮೂಲಕ ವಿತರಿಸುವ ಇ-ಸ್ಟ್ಯಾಂಪ್ ಮಾರಾಟ ಮಾಡುತ್ತಿರುವ ಸಹಕಾರಿ ಸೌಹರ್ದಗಳ ಸಿಬ್ಬಂದಿಗೆ ಜಿಲ್ಲೆಯ ಎಲ್ಲಾ ತಾಲ್ಲೂಕಿನ ಉಪನೋಂದಣಾಧಿಕಾರಿ ಕಚೇರಿಯಲ್ಲಿ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ಜ.10 ರಂದು ಮಧ್ಯಾಹ್ನ 12 ಗಂಟೆಗೆ ಚಳ್ಳಕೆರೆ, ಜ.11 ರಂದು ಮಧ್ಯಾಹ್ನ 12 ಗಂಟೆಗೆ ಹಿರಿಯೂರು, ಜ.12 ರಂದು ಬೆಳಿಗ್ಗೆ 11 ಗಂಟೆಗೆ ಚಿತ್ರದುರ್ಗ, ಮಧ್ಯಾಹ್ನ 4 ಗಂಟೆಗೆ ಮೊಳಕಾಲ್ಮೂರು, ಜ.13ರಂದು ಮಧ್ಯಾಹ್ನ 12 ಗಂಟೆಗೆ ಹೊಳಲ್ಕೆರೆ, ಮಧ್ಯಾಹ್ನ 4 ಗಂಟೆಗೆ ಹೊಸದುರ್ಗದಲ್ಲಿ ತರಬೇತಿ ಕಾರ್ಯಾಗಾರಗಳು ನಡೆಯಲಿವೆ ಎಂದು ಜಿಲ್ಲಾ ನೋಂದಣಾಧಿಕಾರಿ ಕರಿಯಮ್ಮ.ಟಿ.ಕೆ.ಓ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

