ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ದೊಡ್ಡಬಳ್ಳಾಪುರ,ಇವರ ವತಿಯಿಂದ ದೊಡ್ಡಬಳ್ಳಾಪುರ ತಾಲೂಕಿನ ತುಬಗೆರೆ ವಲಯದ ಚನ್ನಾಪುರ ಗ್ರಾಮದಲ್ಲಿ ಸಿರಿಧಾನ್ಯ ಬಳಕೆಯ ಬಗ್ಗೆ ಹಾಗೂ ಮಣ್ಣು ಪರೀಕ್ಷೆ ಬಗ್ಗೆ ಕೃಷಿ ತರಬೇತಿ ಆಯೋಜಿಸಲಾಯಿತು.
ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ಕೃಷಿ ಇಲಾಖೆಯ ಕೃಷಿ ಅಧಿಕಾರಿ ನವೀನ್ ಮಣ್ಣಿನ ಫಲವತ್ತತೆ ಹೆಚ್ಚಿಸುವ ಬಗ್ಗೆ ಮಾಹಿತಿ ನೀಡಿದರು. ಹವಾಮಾನ ವೈಪರಿತ್ಯದಿಂದ ಕೃಷಿ ಬೆಳೆಗಳ ನಿರ್ವಹಣೆ ಬಗ್ಗೆ ಮಾಹಿತಿ ನೀಡಿದರು. ಸಿರಿಧಾನ್ಯ ಬಳಕೆಯ ಬಗ್ಗೆ ಅರಿವು ಮೂಡಿಸಿ ಹೆಚ್ಚೆಚ್ಚು ಸಿರಿಧಾನ್ಯ ಬೆಳೆಯುವಂತಾಗಬೇಕು ಎಂದು ತಿಳಿಸಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಯೋಜನಾಧಿಕಾರಿ ಸುಧಾ ಬಾಸ್ಕರ್ ಮಾತನಾಡಿ ಪಾಲಿಷ್ ಅಕ್ಕಿಯಿಂದ ಅನಾರೋಗ್ಯ ಜಾಸ್ತಿ ಆಗುತ್ತಿದ್ದು ಸಿರಿಧಾನ್ಯಗಳ ಬಳಕೆಯಿಂದ ಆರೋಗ್ಯ ಹೆಚ್ಚಳ ಆಗುವುದು, ಸಿರಿಧಾನ್ಯ ಮುಂದಿನ ಪೀಳಿಗೆಗೆ ಪರಿಚಯಿಸುವ ಕೆಲಸವಾಗಬೇಕೆಂದು ತಿಳಿಸಿದರು
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೃಷಿ ಮೇಲ್ವಿಚಾರಕರಾದ ಲೋಹಿತ್ ಗೌಡ ಮಾತನಾಡಿ ಸಿರಿಧಾನ್ಯ ಬೆಳೆಗೆ ಪ್ರೋತ್ಸಾಹ ಮಾಡುವ ನಿಟ್ಟಿನಲ್ಲಿ ರೈತರಿಗೆ ತರಬೇತಿ ನೀಡುವುದು ಅದ್ಯಾಯನ ಪ್ರವಾಸದ ಮೂಲಕ ಸಿರಿಧಾನ್ಯ ಬೆಳೆಯಲು ಪ್ರೋತ್ಸಾಹ ಮಾಡಲಾಗುತ್ತಿದೆ.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ಹತ್ತು ಹಲವಾರು ಕಾರ್ಯಕ್ರಮಗಳನ್ನು ರಾಜ್ಯಾದ್ಯಂತ ಮಾಡುತ್ತಿದ್ದು ಸಧಸ್ಯರು ಉಪಯೋಗ ಪಡೆದುಕೊಳ್ಳಬೇಕೆಂದು ತಿಳಿಸಿದರು.
ಒಕ್ಕೂಟದ ಅಧ್ಯಕ್ಷ ಮುನಿರಾಜು, ಸೇವಾಪ್ರತಿನಿಧಿ ಸಿದ್ದಗಂಗಮ್ಮ ಪ್ರಗತಿಬಂದು ಸಂಘದ ಸದಸ್ಯರು ಹಾಗೂ ಸ್ವ ಸಹಾಯ ಸಂಘಗಳ ಸದಸ್ಯರು ಹಾಜರಿದ್ದರು.