ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಪಶುಪಾಲನಾ ಮತ್ತು ಪಶುವೈದ್ಯಸೇವಾ ಇಲಾಖೆಯಿಂದ 2024-25 ನೇ ಸಾಲಿನ ಅನುಮೋದಿತ ಕ್ರಿಯಾ ಯೋಜನೆಯಂತೆ ರೈತರಿಗೆ ತರಬೇತಿ ಕಾರ್ಯಕ್ರಮವನ್ನು ಅಕ್ಟೋಬರ್ 29 ಹಾಗೂ 30 ಎರಡು ದಿನಗಳು ಹಮ್ಮಿಕೊಳ್ಳಲಾಗಿದೆ.
ಅಸಕ್ತ ರೈತರು ಅಕ್ಟೋಬರ್ 25 ಸಂಜೆ 4 ಗಂಟೆಯೊಳಗೆ ಸ್ಥಳೀಯ ಪಶುವೈದ್ಯ ಸಂಸ್ಥೆಗಳಲ್ಲಿ ಅಥವಾ ವಿಸ್ತರಣಾಧಿಕಾರಿಗಳು ಪಶುಪಾಲನಾ ಇಲಾಖೆ, ಬೆಂಗಳೂರು ಉತ್ತರ ತಾಲ್ಲೂಕು, ದಂಡುಪ್ರದೇಶ ಕ್ವೀನ್ಸ್ ರಸ್ತೆ, ಬೆಂಗಳೂರು ಇವರಿಗೆ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: 9900595033 ನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.