ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕೌಶಲ್ಯಾಭಿವೃದ್ಧಿ ನಿಗಮದ ಸ್ಪರ್ಧೆಯಲ್ಲಿ ವಿಜೇತರಾದ ರಾಜ್ಯದ ಯುವಜನರಿಗೆ ಜ್ಞಾನಾರ್ಜನೆಗೆ ಸೂಕ್ತ ವೇದಿಕೆ ಕಲ್ಪಿಸಿ, ಚೀನಾದ ಶಾಂಘೈನಲ್ಲಿ ಜರುಗಲಿರುವ ವಲ್ರ್ಡ್ ಸ್ಕಿಲ್-2026 ನಲ್ಲಿ ಭಾರತವನ್ನು ಪ್ರತಿನಿಧಿಸಲು ಅವಕಾಶ ಕಲ್ಪಿಸಲಾಗುತ್ತಿದೆ.
ಇದಕ್ಕಾಗಿ 2025-26ನೇ ಸಾಲಿನಲ್ಲಿ ಕರ್ನಾಟಕ ರಾಜ್ಯ ಕೌಶಲ್ಯ ಒಲಿಂಪಿಕ್ಸ್-2025 ಸ್ಪರ್ಧಾ ಕಾರ್ಯಕ್ರಮವನ್ನು ಜಿಲ್ಲಾ, ವಲಯ ಹಾಗೂ ರಾಜ್ಯ ಮಟ್ಟದಲ್ಲಿ ಆಯೋಜಿಸಲಾಗುವುದು. ಸ್ಪರ್ಧೆ ವಿಜೇತರಾದವರನ್ನು ಗುರುತಿಸಿ ದಕ್ಷಿಣ ಪ್ರಾದೇಶಿಕ ಹಂತಕ್ಕೆ ಆಯ್ಕೆ ಮಾಡಲಾಗುವುದು. ಇವರಿಗೆ ರಾಷ್ಟ್ರೀಯ, ಅಂತರಾಷ್ಟ್ರೀಯ ಮಟ್ಟದ ವಿಶ್ವ ಕೌಶಲ್ಯ ಸ್ಪರ್ಧೆಯಲ್ಲಿ ಭಾಗವಹಿಸಲು ಪ್ರೇರೆಪಿಸಲಾಗುವುದು.
ಯುವಜನತೆ ಸೆ.30ರ ಒಳಗೆ www.skillindiadigital.gov.in ಪೋರ್ಟಲ್‍ನಲ್ಲಿ ಉಚಿತವಾಗಿ ನೊಂದಾಯಿಸಿಕೊಂಡು ತರಬೇತಿ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ತಿಳಿಸಿದ್ದಾರೆ.

