ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧದ ಷಡ್ಯಂತ್ರವನ್ನು ಖಂಡಿಸಿ, ಪ್ರಕರಣವನ್ನು ಎನ್ಐಎ ಅಥವಾ ಸಿಬಿಐ ತನಿಖೆಗೆ ನೀಡಬೇಕೆಂದು ಆಗ್ರಹಿಸಿ ರಾಜ್ಯ ಕಾಂಗ್ರೆಸ್ಸರ್ಕಾರದ ವಿರುದ್ಧ ಹಮ್ಮಿಕೊಳ್ಳಲಾಗಿದ್ದ ʼಧರ್ಮಸ್ಥಳ ಚಲೋ ಕಾರ್ಯಕ್ರಮ ಮತ್ತು ಬೃಹತ್ಸಮಾವೇಶʼದಲ್ಲಿ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಪಾಲ್ಗೊಂಡಿದ್ದರು.
ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷರಾದ ಬಿ.ವೈ ವಿಜಯೇಂದ್ರ, ಮಾಜಿ ಮುಖ್ಯಮಂತ್ರಿಗಳಾದ ಡಿ.ವಿ ಸದಾನಂದಗೌಡ, ಜಗದೀಶ್ ಶೆಟ್ಟರ್, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ವಿಧಾನ ಪರಿಷತ್ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ರಾಜ್ಯ ಸಹ ಉಸ್ತುವಾರಿ ಸುಧಾಕರ್ ರೆಡ್ಡಿ,
ಸಂಸದರು, ಮಾಜಿ ಸಂಸದರು, ಮಾಜಿ ಸಚಿವರು, ಶಾಸಕರು, ಮಾಜಿ ಶಾಸಕರು, ಪರಿಷತ್ಸದಸ್ಯರು, ರಾಜ್ಯ ಪದಾಧಿಕಾರಿಗಳು, ವಿವಿಧ ಮೋರ್ಚಾಗಳ ಅಧ್ಯಕ್ಷರು, ಜಿಲ್ಲಾಧ್ಯಕ್ಷರು, ಪ್ರಮುಖರು ಮತ್ತು ಅಪಾರ ಸಂಖ್ಯೆಯಲ್ಲಿ ಹಿಂದೂ ಕಾರ್ಯಕರ್ತರು ಉಪಸ್ಥಿತರಿದ್ದರು.

