ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಪ್ರಾದೇಶಿಕ ಸಾರಿಗೆ ಅಧಿಕಾರಿಗಳವರ ಕಚೇರಿ ವತಿಯಿಂದ ಇದೇ ಏ.29 ರಂದು ಸಂಜೆ 4 ರಿಂದ 5.30 ರವರೆಗೆ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಆವರಣದಲ್ಲಿ ಸಾರಿಗೆ ಇಲಾಖೆಗೆ ಸಂಬಂಧಿಸಿದ ಕುಂದುಕೊರತೆ ಆಲಿಸಲು ಹಾಗೂ ಸಾರ್ವಜನಿಕರ ಅನುಕೂಲಕ್ಕಾಗಿ “ಸಾರಿಗೆ ಅದಾಲತ್” ಏರ್ಪಡಿಸಲಾಗಿದೆ.
ಸಾರ್ವಜನಿಕರು ಸಾರಿಗೆ ಅದಾಲತ್ನಲ್ಲಿ ಭಾಗವಹಿಸಿ ಇಲಾಖೆಗೆ ಸಂಬಂಧಿಸಿದ ಕುಂದುಕೊರತೆಗಳನ್ನು ಹಾಗೂ ತಮ್ಮ ಅಹವಾಲುಗಳನ್ನು ಸಲ್ಲಿಸಿ ಪರಿಹಾರ ಪಡೆದುಕೊಳ್ಳಬೇಕು ಹಾಗೂ ಸಾರಿಗೆ ಅದಾಲತ್ನ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಕೋರಿದ್ದಾರೆ.