ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ನಲ್ಲಿ ಅಧಿಕಾರ ಹಂಚಿಕೆ ಜಟಾಪಟಿ ಜೋರಾಗಿರುವ ನಡೆಯುತ್ತಿರುವ ಸಂದರ್ಭದಲ್ಲೇ ದೆಹಲಿಗೆ ಹೊರಟಿದ್ದಾರೆ.
ರಾಜ್ಯ ಕಾಂಗ್ರೆಸ್ ಬಿಕ್ಕಟ್ಟು ಉಲ್ಬಣಗೊಳ್ಳುತ್ತಿದ್ದು ಈ ಬಗ್ಗೆ ಅವರು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಜತೆ ಚರ್ಚೆ ನಡೆಸುವ ನಿರೀಕ್ಷೆ ಇದೆ ಎನ್ನಲಾಗಿದೆ.
ಈಗಾಗಲೇ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಸುದೀರ್ಘ ಮಾತುಕತೆ ನಡೆಸಿದ್ದಾರೆ. ಸದ್ಯ ಬೆಂಗಳೂರಿನಿಂದ ಹೊರಟ ಅವರ ಜತೆಗೆ ಕಾರಿನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಸಹ ಏರ್ಪೋರ್ಟ್ಗೆ ತೆರಳಿರುವುದು ಕುತೂಹಲಕ್ಕೆ ಕಾರಣವಾಗಿದೆ.

