ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಹಿರಿಯೂರು ತಾಲ್ಲೂಕಿನ ಬಬ್ಬೂರುಫಾರಂನ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಗ್ರೀನ್ ಗ್ರೋಥ್ ಸಹಯೋಗದಲ್ಲಿ ಇದೇ ಜೂನ್ 06ರಂದು ಬೆಳಿಗ್ಗೆ 10ಕ್ಕೆ ಜಿಲ್ಲೆಯ ನೈಸರ್ಗಿಕ ಕೃಷಿಕರಿಗೆ ಮರ ಆಧಾರಿತ ನೈಸರ್ಗಿಕ ಕೃಷಿ ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಈ ತರಬೇತಿ ಕಾರ್ಯಕ್ರಮದಲ್ಲಿ ಬೆಂಗಳೂರಿನ ಡಾ. ಚಂದ್ರಶೇಖರ್ ಬಿರಾದಾರ್ ಅವರು ಸುಸ್ಥಿರ ಆದಾಯ, ಉತ್ತಮ ಅರೋಗ್ಯ, ಪೌಷ್ಟಿಕ ಆಹಾರ ಮತ್ತು ಉತ್ತಮ ಪರಿಸರ ನಿರ್ವಹಣೆಗೆ ಗೋವು ಹಾಗೂ ಮರ ಆಧಾರಿತ ನೈಸರ್ಗಿಕ ಕೃಷಿ ಕುರಿತು ವಿಷಯ ಮಂಡನೆ ಮಾಡುವರು.
ಆಸಕ್ತ 75 ಜನ ರೈತಭಾಂದವರು ಈ ತರಬೇತಿಯಲ್ಲಿ ಭಾಗವಹಿಸಲು ಮೊಬೈಲ್ ಸಂಖ್ಯೆ 8277931058 ಗೆ ಕರೆಮಾಡಿ ತರಬೇತಿಯ ಸದುಪಯೋಗ ಪಡೆದು ಕೊಳ್ಳಬೇಕು ಎಂದು ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕ ಆರ್.ರಜನೀಕಾಂತ ತಿಳಿಸಿದ್ದಾರೆ.
ಮೊದಲು ನೋಂದಾವಣಿ ಮಾಡಿಕೊಂಡ 75 ಜನ ರೈತಭಾಂದವರಿಗೆ ಆದ್ಯತೆ ಮೇರೆಗೆ ತರಬೇತಿಗೆ ಪರಿಗಣಿಸಲಾಗುವುದು ಹಾಗೂ ತರಬೇತಿಗೆ ಹಾಜರಾಗುವ ರೈತಬಾಂಧವರು ಕಡ್ಡಾಯವಾಗಿ ತಮ್ಮ ಎಫ್‍ಐಡಿ ಕಾರ್ಡ್ ಅಥವಾ ಚುನಾವಣೆ ಗುರುತಿನ ಚೀಟಿ ತರಲು ಕೋರಿದೆ.