ಹಿರಿಯ ಪತ್ರಕರ್ತ ವಸಂತ ನಾಡಿಗೇರ್‌ಗೆ ನುಡಿ ನಮನ ಇಂದು

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ನಾಡಿನ ಹಿರಿಯ ಪತ್ರಕರ್ತರಾದ ವಸಂತ ನಾಡಿಗೇರ್ ಅವರ ನುಡಿ ನಮನ ಕಾರ್ಯಕ್ರಮವನ್ನು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘವು ಆಯೋಜಿಸಿದೆ.

ಕನ್ನಡ ಪ್ರಭ ಮತ್ತು ಸಂಯುಕ್ತ ಕರ್ನಾಟಕ ಪತ್ರಿಕೆಯಿಂದ ಮೊದಲ್ಗೊಂಡು ವಿಜಯ ಕರ್ನಾಟಕ, ವಿಶ್ವವಾಣಿ ಸೇರಿದಂತೆ ಹಲವು ಮಾಧ್ಯಮದಲ್ಲಿ ಮೂರು ದಶಕಗಳಿಗೂ ಹೆಚ್ಚು ಕಾಲ ಸೇವೆ ಸಲ್ಲಿಸಿದ್ದ ವಸಂತ ನಾಡಿಗೇರ್ ಅವರ ವೃತ್ತಿ ಸೇವೆಯನ್ನು ಸ್ಮರಿಸಿ ನುಡಿ ನಮನ ಕಾರ್ಯಕ್ರಮ ಸಂಘಟಿಸಲಾಗಿದೆ.

ಸೆ.12ರಂದು ಗುರುವಾರ ಬೆಳಿಗ್ಗೆ 11.30ಕ್ಕೆ ಕೆಯುಡಬ್ಲೂಜೆ ಸಭಾಂಗಣ, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ, 3ನೇ ಮಹಡಿ, ಕೆ.ಜಿ.ರಸ್ತೆ, ಬೆಂಗಳೂರು ಇಲ್ಲಿ ಕಾರ್ಯಕ್ರಮ ನಡೆಯಲಿದ್ದು, ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ವಿಜಯ ಕರ್ನಾಟಕ ಸಂಪಾದಕ ಸುದರ್ಶನ ಚನ್ನಂಗಿಹಳ್ಳಿ ಮತ್ತು ಕಸ್ತೂರಿ ಸಂಪಾದಕ ಶಾಂತಲಾ ಧರ್ಮರಾಜ್ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

- Advertisement -  - Advertisement - 
Share This Article
error: Content is protected !!
";