ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಶ್ರೀ ಕೊಂಗಾಡಿಯಪ್ಪ ಪದವಿ ಪೂರ್ವ ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಸಾಂಸ್ಕೃತಿಕ ಕಾರ್ಯಕ್ರಮ ಶ್ರೀ ಕೊಂಗಾಡಿಯಪ್ಪ ಪದವಿ ಪೂರ್ವ ಕಾಲೇಜಿನಲ್ಲಿ ನಡೆಸಲಾಯಿತು.
ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಜಿಲ್ಲೆಯ ನಾಲ್ಕು ತಾಲೂಕುಗಳಿಂದ ವಿವಿಧ ಸ್ಪರ್ಧಾಳುಗಳು ಭಾಗವಹಿಸಿದ್ದರು. ಕಾರ್ಯಕ್ರಮವನ್ನು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎನ್ ಮೋಹನ್ ಕುಮಾರ್ ಉದ್ಘಾಟಿಸಿದರು.
ಸ್ಪರ್ಧೆಗಳು ಮುಗಿದ ನಂತರ ವಿಜೇತರಿಗೆ ನಗದು ಬಹುಮಾನ ಪ್ರಶಸ್ತಿ ಪತ್ರ ನೀಡಲಾಯಿತು. “ಜಾನಪದ ನೃತ್ಯ ವಿಭಾಗದಲ್ಲಿ ಶ್ರೀ ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಪೃಥ್ವಿ ಕೆ ಅತ್ಯಾಕರ್ಷಕ ಜಾನಪದ ನೃತ್ಯ ಪ್ರದರ್ಶನ ನೀಡಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದಳು.
ವಿವಿಧ ವಿಭಾಗಗಳಲ್ಲಿ ವಿಜೇತರಿಗೆ ನಗದು ಬಹುಮಾನ ಪ್ರಶಸ್ತಿ ಪತ್ರ ಪ್ರದಾನ ಮಾಡಲಾಯಿತು. ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಎನ್ ಶ್ರೀನಿವಾಸ, ಲಾವಣ್ಯ ಕಾಲೇಜ್ ಪ್ರಾಮ್ಶುಪಾಲ ಎಂ. ಸಿ. ಮಂಜುನಾಥ್, ಅನಂತಮೂರ್ತಿ, ವೇಣುಗೋಪಾಲ್, ಶಿವಶಂಕರ್,ಬೈರಾರೆಡ್ಡಿ ಮೊದಲಾದವರು ಭಾಗವಹಿಸಿದ್ದರು.

