ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿ ‘ಜಲಸಂರಕ್ಷಣೆ ಜನರ ಭಾಗವಹಿಸುವಿಕೆ‘ ಯೋಜನೆಯ ಅಂತರ್ಜಲ ಮರುಪೂರಣದಲ್ಲಿನ ಅತ್ಯುತ್ತಮ ಪ್ರಯತ್ನ ಗುರುತಿಸಿ ರಾಷ್ಟ್ರೀಯ ‘ಜಲ ಸಂಚಯ ಜನ್ ಭಾಗೀದಾರಿ‘ ರಾಷ್ಟ್ರಪ್ರಶಸ್ತಿಗೆ ತುಮಕೂರು ಜಿಲ್ಲಾ ಪಂಚಾಯತ್ ಭಾಜನವಾಗಿದೆ.
ಗೌರವಾನ್ವಿತಾ ರಾಷ್ಟ್ರಪತಿಗಳಾದ ದ್ರೌಪದಿ ಮುರ್ಮು ಅವರಿಂದ ಜಿಲ್ಲಾ ಪಂಚಾಯತ್ ಸಿಇಒ ಪ್ರಭು ಗಣೇಶ್ ಪ್ರಶಸ್ತಿ ಸ್ವೀಕರಿಸಿರುವ ಹಿನ್ನೆಲೆಯಲ್ಲಿ ಬುಧವಾರ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ ಪರಮೇಶ್ವರ್ ಅವರು ಅಭಿನಂದಿಸಿ ಶುಭಹಾರೈಸಿದರು.
ಈ ಸಂದರ್ಭದಲ್ಲಿ ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಪಂ ಸಿಇಒ ಜಿ.ಪ್ರಭು ಸೇರಿದಂತೆ ಇತರೆ ಅಧಿಕಾರಿಗಳು ಹಾಜರಿದ್ದರು.

