ತುಮಕೂರು, ಶಿವಮೊಗ್ಗ, ಚಿತ್ರದುರ್ಗ, ಹಾಸನ ಜಿಲ್ಲೆಗಳ ಹೃದಯ ರೋಗಿಗಳ ಅನುಕೂಲಕ್ಕಾಗಿ ಕಾರ್ಡಿಯಾಲಜಿ ಕೇಂದ್ರ

News Desk

ಚಂದ್ರವಳ್ಳಿ ನ್ಯೂಸ್, ತುಮಕೂರು:
ತುಮಕೂರು ನಗರದಲ್ಲಿ ರೂ. 7೦ ಕೋಟಿ ರೂ. ವೆಚ್ಚದಲ್ಲಿ ಕಾರ್ಡಿಯಾಲಜಿ ಕೇಂದ್ರ ಆರಂಭಿಸಲಾಗುತ್ತದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.

ಅವರು ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ, ಶಿರಾ ಗೇಟ್ ರಸ್ತೆ ಉದ್ಘಾಟಿಸಿ ಮಾತನಾಡಿದರು.

 ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಯ ಭಾಗವಾಗಿ ಜಿಲ್ಲೆಯಲ್ಲಿ ೭೦ ಕೋಟಿ ರೂ. ವೆಚ್ಚದಲ್ಲಿ ಕಾರ್ಡಿಯಾಲಜಿ ಕೇಂದ್ರವನ್ನು ನಿರ್ಮಿಸಲಾಗುವುದು.  ಹೃದ್ರೋಗ ಸಮಸ್ಯೆಯಿದ್ದವರು ತುಮಕೂರು  ಜಿಲ್ಲೆಯಿಂದ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ತಲುಪಲು ಕನಿಷ್ಠ ೨ ತಾಸು ಬೇಕಾಗುತ್ತದೆ. ಇದರಿಂದ ತುರ್ತು ಸಂದರ್ಭಗಳಲ್ಲಿ ಸೂಕ್ತ ಚಿಕಿತ್ಸೆ ದೊರೆಯದೆ ರೋಗಿಗಳು ಸಾವನ್ನಪ್ಪುವ ಸಾಧ್ಯತೆಯಿರುತ್ತದೆ.  ಜಿಲ್ಲೆಯಲ್ಲಿ ಕಾರ್ಡಿಯಾಲಜಿ ಕೇಂದ್ರ ನಿರ್ಮಿಸುವುದರಿಂದ ಜಿಲ್ಲೆಯ ಜನರಿಗೆ ಮಾತ್ರವಲ್ಲದೇ ಶಿವಮೊಗ್ಗ, ಹಾಸನ, ಚಿತ್ರದುರ್ಗ ಮುಂತಾದ ಜಿಲ್ಲೆಗಳ ಜನರಿಗೂ ಅನುಕೂಲವಾಗಲಿದೆ ಎಂದರು.

ಆಧುನಿಕ ಜಿಲ್ಲಾಸ್ಪತ್ರೆಗೆ ೧೩೦ ಕೋಟಿ ರೂ.-
ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಜಿಲ್ಲಾಸ್ಪತ್ರೆಯು ಕಲ್ಲಿನ ಕಟ್ಟಡವಾಗಿದ್ದು
, ತುಂಬಾ ಹಳೆಯದಾಗಿದೆ. ಜಿಲ್ಲಾಸ್ಪತ್ರೆಗೆ ಆಧುನಿಕ ರೂಪ ನೀಡಿ ಸುಸಜ್ಜಿತಗೊಳಿಸಲು ೧೩೦ ಕೋಟಿ ರೂ. ವೆಚ್ಚದ ಪ್ರಸ್ತಾವನೆಯನ್ನು ಸಿದ್ಧಪಡಿಸಲಾಗಿದೆ ಎಂದರಲ್ಲದೆ  ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಇತ್ತೀಚೆಗೆ ಜಿಲ್ಲೆಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ  ಉದ್ಯೋಗಸ್ಥ ಮಹಿಳೆಯರಿಗಾಗಿ ವಸತಿ ನಿಲಯ ನಿರ್ಮಿಸಲು   ೫೦ ಕೋಟಿ ರೂ. ಗಳ ಅನುದಾನವನ್ನು   ಒದಗಿಸಲು ಒಪ್ಪಿದ್ದಾರೆ. ಇದಕ್ಕಾಗಿ ತುಮಕೂರು ವಿಶ್ವವಿದ್ಯಾನಿಲಯದ ಆವರಣದೊಳಗೆ ಸ್ಥಳವನ್ನು ಗುರುತಿಸಲಾಗಿದೆ ಎಂದು ತಿಳಿಸಿದರು.

- Advertisement -  - Advertisement - 
Share This Article
error: Content is protected !!
";