ಚಂದ್ರವಳ್ಳಿ ನ್ಯೂಸ್, ಬೆಂಗಳೂರು :
ಇಬ್ಬರು ಯುವಕರು ತಮ್ಮ ಬೈಕ್ ನಲ್ಲಿ ಮಾರಕಾಸ್ತ್ರ ಝಳಪಿಸುತ್ತಾ ವ್ಹೀಲಿಂಗ್ ಮಾಡಿತ್ತಾ ಭಯ ಹುಟ್ಟಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಬೆಂಗಳೂರು ನಗರದ ಕಾಮಾಕ್ಷಿಪಾಳ್ಯ ಸಂಚಾರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಮಹೇಶ್ (19) ಹಾಗೂ ಮಂಜುನಾಥ್ (19) ಬಂಧಿತ ಆರೋಪಿಗಳಾಗಿದ್ದಾರೆ. ಕಳೆದ ಮಾರ್ಚ್ 15ರಂದು ಔಟರ್ ರಿಂಗ್ ರಸ್ತೆಯ ಚೌಡೇಶ್ವರಿ ನಗರ ಬಸ್ ನಿಲ್ದಾಣದ ಬಳಿ ಮಾರಕಾಸ್ತ್ರವನ್ನು ರಸ್ತೆಗೆ ಉಜ್ಜುತ್ತಾ, ಸ್ಕೂಟರ್‌ನಲ್ಲಿ ವ್ಹೀಲಿಂಗ್ ಮಾಡುತ್ತ ಸಾಗಿದ್ದ ಆರೋಪಿಗಳ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.
ಸಂಚಾರ ಠಾಣೆ ಪೊಲೀಸರು ವಿಡಿಯೋ ವೈರಲ್ ಆಗುತ್ತಿದ್ದಂತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಇಬ್ಬರೂ ಆರೋಪಿಗಳನ್ನು ಪತ್ತೆಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಆರೋಪಿಗಳಿಬ್ಬರು ತಮ್ಮ ಸಹಚರರೊಂದಿಗೆ ಏರಿಯಾದಲ್ಲಿ ಭಯ ಸೃಷ್ಟಿಸುವ ಉದ್ದೇಶದಿಂದ ಕೃತ್ಯ ಎಸಗಿರುವುದಾಗಿ ಪ್ರಾಥಮಿಕ ವಿಚಾರಣೆಯಲ್ಲಿ ತಿಳಿದು ಬಂದಿದೆ.
ನಂದಿನಿ ಲೇಔಟ್ ಕಾನೂನು ಸುವ್ಯವಸ್ಥೆ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ ಹಾಗೂ ಶಸ್ತ್ರಾಸ್ತ್ರ ಕಾಯ್ದೆಗಳಡಿ ಪ್ರತ್ಯೇಕ ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.