ಸರ್ಕಾರಿ ಶಾಲಾ ಶಿಕ್ಷಕಿಯಿಂದ ವೇಶ್ಯಾವಾಟಿಕೆ: ಇಬ್ಬರು ಅರೆಸ್ಟ್

khushihost

ಚಂದ್ರವಳ್ಳಿ ನ್ಯೂಸ್, ಕಾರ್ಕಳ :
ಕಾರ್ಕಳ ತಾಲೂಕಿನ ಗ್ರಾಮವೊಂದರಲ್ಲಿ ಶಿಕ್ಷಕಿಯೋರ್ವಳು ತನ್ನ ಮನೆಯಲ್ಲಿಯೇ ವೇಶ್ಯಾವಾಟಿಕೆ ನಡೆಸುತ್ತಿದ್ದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.

ಸರ್ಕಾರಿ ಶಾಲಾ ಶಿಕ್ಷಕಿ ಹಾಗೂ ಓರ್ವ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿದ್ದು, ಶಿಕ್ಷಕಿ ಸೇರಿದಂತೆ ಇಬ್ಬರು ಆರೋಪಿಗಳು ಸಿಕ್ಕಿಬಿದ್ದಿದ್ದಾರೆ.

ಸರ್ಕಾರಿ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಲೇ ತನ್ನ ಮನೆಯಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದಳು. ಈ ಕುರಿತು ಖಚಿತ ಮಾಹಿತಿ ಪಡೆದ ಪೊಲೀಸರು ದಿಢೀರ್ ದಾಳಿ ನಡೆಸಿದ್ದಾರೆ. ಈ ವೇಳೆ ಶಿಕ್ಷಕಿ ವೇಶ್ಯಾವಾಟಿಕೆ ನಡೆಸುತ್ತಿರುವುದು ಗೊತ್ತಾಗಿದೆ. ಈ ವೇಳೆ ಓರ್ವ ಯುವತಿಯನ್ನು ಪೊಲೀಸರು ರಕ್ಷಿಸಿದ್ದಾರೆ. ಘಟನೆಯ ಸಂಬಂಧ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -  - Advertisement - 
Share This Article
error: Content is protected !!
";