ಚಂದ್ರವಳ್ಳಿ ನ್ಯೂಸ್, ದಾವಣಗೆರೆ:
ಇಬ್ಬರು ಅಪ್ರಾಪ್ತ ಬಾಲಕರು ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿರುವ ಘಟನೆ ದಾವಣಗೆರೆ ತಾಲೂಕಿನ ಗ್ರಾಮವೊಂದರಲ್ಲಿ ಭಾನುವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ದಾವಣಗೆರೆ ಜಿಲ್ಲೆಯ ಹದಡಿ ಪೊಲೀಸ್ ಠಾಣೆಯಲ್ಲಿ ಘಟನೆ ನಡೆದಿದ್ದು ಈ ಸಂಬಂಧ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಇಬ್ಬರು ಅಪ್ರಾಪ್ತ ಬಾಲಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನೆರೆಹೊರೆಯ 15 ಮತ್ತು 17 ವರ್ಷದ ಅಪ್ರಾಪ್ತ ಬಾಲಕರು ಮನೆ ಮುಂದೆ ಆಟವಾಡುತ್ತಿದ್ದ ಏಳು ವರ್ಷದ ಬಾಲಕಿಗೆ ಪುಸಲಾಯಿಸಿ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾರೆ ಎನ್ನಲಾಗಿದೆ.
ಮಗಳು ಕಾಣಿಸದ ಹಿನ್ನೆಲೆ ತಾಯಿ ಹುಡುಕಿಕೊಂಡು ನೆರೆ ಮನೆಗೆ ಹೋದಾಗ ಕೃತ್ಯ ಬಯಲಿಗೆ ಬಂದಿದೆ. ಬಾಲಕರ ವಿರುದ್ಧ ಬಾಲಕಿಯ ಪೋಷಕರು ಪೋಕ್ಸೋ ದೂರು ದಾಖಲಿಸಿದ್ದಾರೆ.
ಲೈಂಗಿಕ ದೌರ್ಜನ್ಯಕ್ಕೊಳಗಾದ ಏಳು ವರ್ಷದ ಬಾಲಕಿಗೆ ಚಿಕಿತ್ಸೆ ನೀಡಲಾಗಿದೆ. ಪೊಲೀಸರು ಇಬ್ಬರು ಆರೋಪಿ ಬಾಲಕರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ.