ಫೆ.20 ಮತ್ತು 21ರಂದು ಎರಡು ದಿನಗಳ ಓರಿಯಂಟೇಷನ್ ತರಬೇತಿ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ಇದೇ ಫೆ.20 ಮತ್ತು 21ರಂದು ಬೆಳಿಗ್ಗೆ 10ಕ್ಕೆ ನಗರದ ಜಿಲ್ಲಾ ಬಾಲಭವನ ಸಭಾಂಗಣದಲ್ಲಿ ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣೆ ಕಾಯ್ದೆ ಅನುಷ್ಠಾನದಲ್ಲಿ ಭಾಗೀದಾರ ಇಲಾಖೆಗಳ ಪಾತ್ರದ ಕುರಿತು ಎರಡು ದಿನಗಳ ಓರಿಯಂಟೇಷನ್ ತರಬೇತಿ ಹಮ್ಮಿಕೊಳ್ಳಲಾಗಿದೆ.

ಫೆ.20ರಂದು ಬೆಳಿಗ್ಗೆ 10ಕ್ಕೆ ಜಿಲ್ಲಾ ನ್ಯಾಯಾಲಯದ ಜೆಎಂಎಫ್ಸಿ 2ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಆರ್.ಸಹನ ಕಾರ್ಯಕ್ರಮ ಉದ್ಘಾಟಿಸುವರು. ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಧ್ಯಕ್ಷತೆ ವಹಿಸುವರು.

- Advertisement - 

ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯಿತಿ ಸಿಇಒ ಎಸ್.ಜೆ.ಸೋಮಶೇಖರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಡಿಹೆಚ್ ಡಾ.ಜಿ.ಪಿ.ರೇಣುಪ್ರಸಾದ್, ಕೆಲಸದ ಸ್ಥಳದಲ್ಲಿ ಲೈಂಗಿಕ ಕಿರುಕುಳ ತಡೆ ಕಾಯ್ದೆ ಸಮಿತಿ ಅಧ್ಯಕ್ಷೆ ಹಾಗೂ ವಕೀಲೆ ಡಿ.ಕೆ.ಶೀಲಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಿಲ್ಲಾ ನಿರೂಪಣಾಧಿಕಾರಿ ಎಸ್.ವಿಜಯ್ ಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಎನ್.ಪವಿತ್ರ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಭಾಗವಹಿಸುವರು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್ ಬಣಕಾರ್ ತಿಳಿಸಿದ್ದಾರೆ.

 

- Advertisement - 

Share This Article
error: Content is protected !!
";