ಚಂದ್ರವಳ್ಳಿ ನ್ಯೂಸ್, ನೆಲಮಂಗಲ(ಬೆಂ.ಗ್ರಾಮಾಂತರ):
ತಡ ರಾತ್ರಿ ಯುವಕನನ್ನು ಪಾರ್ಟಿಗೆಂದು ಕರೆದ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನೆಲಮಂಗಲ ತಾಲೂಕಿನ ಗೊಲ್ಲಹಳ್ಳಿ ಬಳಿ ತಡರಾತ್ರಿ 1:30ರ ಸಮಯದಲ್ಲಿ ಸಂಭವಿಸಿದೆ.
ಈ ಘಟನೆಯಲ್ಲಿ ದರ್ಶನ್(24) ಭೀಕರವಾಗಿ ಹತ್ಯೆ ಆಗಿದ್ದಾನೆ. ಸ್ಥಳಕ್ಕೆ ನೆಲಮಂಗಲ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.
ಕೊಲೆ ಆರೋಪಿ ವೇಣುಗೋಪಾಲ್ ಘಟನೆ ನಂತರ ನಾಪತ್ತೆಯಾಗಿದ್ದಾನೆ. ಮೇಲ್ನೋಟಕ್ಕೆ ಇಬ್ಬರು ಒಂದೇ ಹುಡುಗಿಯನ್ನು ಪ್ರೀತಿಸುತ್ತಿದ್ದರು ಎನ್ನಲಾಗಿದೆ. ನಿನ್ನೆ ರಾತ್ರಿ ದರ್ಶನ್ನನ್ನು ವೇಣು ಗೋಪಾಲ್ ಪಾರ್ಟಿಗೆ ಕರೆದಿದ್ದಾನೆ. ಈ ವೇಳೆ ಇಬ್ಬರ ನಡುವೆ ಗಲಾಟೆ ಶುರುವಾಗಿದೆ. ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಮೃತ ದೇಹ ಮರಣೋತ್ತರ ಪರೀಕ್ಷೆಗೆ ನೆಲಮಂಗಲ ಸರ್ಕಾರಿ ಆಸ್ಪತ್ರೆ ರವಾನೆ ಮಾಡಲಾಗಿದೆ. ಕೊಲೆ ಆರೋಪಿ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.