ಚಂದ್ರವಳ್ಳಿ ನ್ಯೂಸ್, ವಿಜಯನಗರ(ಹೊಸಪೇಟೆ):
ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಲಿಂಗನಾಯಕನಹಳ್ಳಿ ತಾಂಡಾದ ಇಬ್ಬರು ಪ್ರತಿಭಾವಂತ ವಿದ್ಯಾರ್ಥಿಗಳು ಜವಾಹರ ನವೋದಯ ವಿದ್ಯಾಲಯ 6ನೇ ತರಗತಿ ಪ್ರವೇಶ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡುವ ಮೂಲಕ ನವೋದಯ ಶಾಲೆಗೆ ಆಯ್ಕೆಯಾಗಿದ್ದಾರೆ.
ತಾಂಡಾದ ನಿವಾಸಿಗಳಾದ ಆನಂದನಾಯ್ಕ ಅವರ ಪುತ್ರ ಮನೀಷ್ ರಾಠೋಡ್ ಹಾಗೂ ರಾಜಾನಾಯ್ಕ ಅವರ ಪುತ್ರ ವಿಷ್ಣು ರಾಠೋಡ್ ಅವರು ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿ ಈ ಸಾಧನೆ ಮಾಡಿದ್ದಾರೆ.

ಗ್ರಾಮೀಣ ಭಾಗದ ಮತ್ತು ಹಿಂದುಳಿದ ತಾಂಡಾದ ಇಬ್ಬರು ವಿದ್ಯಾರ್ಥಿಗಳು ಏಕಕಾಲಕ್ಕೆ ನವೋದಯದಂತಹ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗೆ ಆಯ್ಕೆಯಾಗಿರುವುದು ತಾಂಡಾದಲ್ಲಿ ಸಂಭ್ರಮ ತಂದಿದೆ. ವಿದ್ಯಾರ್ಥಿಗಳ ಈ ಯಶಸ್ಸಿಗೆ ಅವರ ಪೋಷಕರು, ಶಿಕ್ಷಕರು ಹಾಗೂ ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿ, ಅಭಿನಂದನೆ ಸಲ್ಲಿಸಿದ್ದಾರೆ.

