ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳದಿಂದ ಬಡವರು ಪ್ರಾಣ ಕಳೆದುಕೊಳ್ಳುತ್ತಿರುವ ಘಟನೆಗಳು ಮುಂದುವರೆಯುತ್ತಲೇ ಇದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ನವರ ತವರು ಜಿಲ್ಲೆ ಮೈಸೂರಿನಲ್ಲಿ ಕಳೆದ ಎರಡು ದಿನಗಳಲ್ಲಿ ಇಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆತಂಕ ವ್ಯಕ್ತಪಡಿಸಿದ್ದಾರೆ.
ಸ್ವಾಮಿ ಸಿಎಂ ಸಿದ್ದರಾಮಯ್ಯ ನವರೇ, ತಮ್ಮ ಕಾಟಾಚಾರದ ಸಭೆಗಳಿಂದ ಸಮಸ್ಯೆ ಬಗೆಹರಿಯುವುದಿಲ್ಲ. ಮೈಕ್ರೋ ಫೈನಾನ್ಸ್ ಕಂಪನಿಗಳನ್ನು ಕರೆದು ಈ ಕಿರುಕುಳ ನಿಲ್ಲಿಸುವಂತೆ ಕಟ್ಟುನಿಟ್ಟಿನ ಎಚ್ಚರಿಕೆ ಕೊಡಿ. ಪೊಲೀಸ್ ಸಹಾಯವಾಣಿ ತೆರೆದು ವಸೂಲಿಗಾರರು ಮನೆ ಬಾಗಿಲಿಗೆ ಬಂದರೆ ಸಾರ್ವಜನಿಕರು ಪೊಲೀಸರಿಗೆ ಕರೆ ಮಾಡಿ ತಿಳಿಸುವ ವ್ಯವಸ್ಥೆ ಮಾಡಿ ಎಂದು ಅಶೋಕ್ ತಾಕೀತು ಮಾಡಿದ್ದಾರೆ.
ವಿವಿಧ ಅಭಿವೃದ್ಧಿ ನಿಗಮಗಳಿಗೆ ಅನುದಾನ ಬಿಡುಗಡೆ ಮಾಡಿ ಇನ್ನು ಮುಂದಾದರೂ ಬಡವರು, ದಿನಗೂಲಿ ನೌಕರರು, ಕೃಷಿ ಕಾರ್ಮಿಕರು ಸಾಲಕ್ಕಾಗಿ ಮೈಕ್ರೋ ಫೈನಾನ್ಸ್ ಕಂಪನಿಗಳನ್ನು ಅವಲಂಬಿಸದಂತೆ ಕ್ರಮ ಕೈಗೊಳ್ಳಿ ಎಂದು ಅಶೋಕ್ ಆಗ್ರಹ ಮಾಡಿದ್ದಾರೆ.