ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಸಾವು ಯಾವ ಮೂಲದಲ್ಲಿ ಹೇಗೆ ಬರುತ್ತದೆ ಎನ್ನುವುದು ತಿಳಿಯುವುದಿಲ್ಲ. ಅಡಿಕೆ ತೋಟದಲ್ಲಿದ್ದ ಶ್ರೀಗಂಧ ಮರಗಳನ್ನು ಕಳವು ಮಾಡಲು ಬಂದಿದ್ದ ಇಬ್ಬರು ಯುವಕರು ವಿದ್ಯುತ್ ಶಾಕ್ ಆಗಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಿರಿಯೂರು ತಾಲೂಕಿನಲ್ಲಿ ಜರುಗಿದೆ.
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೃಷ್ಣಾಪುರ ಗ್ರಾಮದ ಜಯರಾಂ ಎಂಬುವವರ ಅಡಿಕೆ ತೋಟದಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತರು ಮಧ್ಯಪ್ರದೇಶ ಮೂಲದ ಮೋಹಿತ್ (24) ಹಾಗೂ ಕತರ್ವ (38) ಎಂದು ಗುರುತಿಸಲಾಗಿದೆ.
ಜಯರಾಂ ಅವರ ಅಡಿಕೆ ತೋಟದಲ್ಲಿ ಕೆಲ ಶ್ರೀಗಂಧ ಮರಗಳ ಕಳ್ಳತನ ಮಾಡಲು ಹೋಗಿ ವಿದ್ಯುತ್ ತಂತಿ ಸ್ಪರ್ಶಿಸಿ ಇಬ್ಬರೂ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಅಬ್ಬಿನಹೊಳೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.