ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ :
ನಗರದ ಡಾ.ಬಾಬು ಜಗಜೀವನ್ ರಾಮ್ ಭವನದಲ್ಲಿ ಬೆಂಗಳೂರು ಜಿಲ್ಲಾ ಪೊಲೀಸ್ ವತಿಯಿಂದ ಯುಗಾದಿ ಮತ್ತು ರಂಜಾನ್ ಹಬ್ಬದ ಕುರಿತು ಶಾಂತಿ ಸಭೆಯನ್ನು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪೊಲೀಸ್ ಅಧೀಕ್ಷಕರವರ ನೇತೃತ್ವದಲ್ಲಿ ನೆಡೆಸಲಾಯಿತು.
ಯುಗಾದಿ ಮತ್ತು ರಂಜಾನ್ ಹಬ್ಬದ ಧಾರ್ಮಿಕ ಆಚರಣೆಯ ಮೆರವಣಿಗೆ ಇತ್ಯಾದಿ ಕಾರ್ಯಕ್ರಮಗಳಿದ್ದಲ್ಲಿ ಅನುಮತಿ ಮೇರೆಗೆ ಶಾಂತಿಯುತವಾಗಿ ಆಚರಿಸಲು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಸಿ ಕೆ ಬಾಬಾ ತಿಳಿಸಿದರು.
ವಿವಿಧ ಸಮುದಾಯಗಳ ಮುಖಂಡರುಗಳ ಸಮ್ಮುಖದಲ್ಲಿ ಸಭೆ ನಡೆಸಿ ಯುಗಾದಿ ಮತ್ತು ರಂಜಾನ್ ಹಬ್ಬದ ಧಾರ್ಮಿಕ ಆಚರಣೆಯ ಮೆರವಣಿಗೆ ಇತ್ಯಾದಿ ಕಾರ್ಯಕ್ರಮಗಳಿದ್ದಲ್ಲಿ ಅನುಮತಿ ಮೇರೆಗೆ ಶಾಂತಿಯುತವಾಗಿ ಆಚರಿಸಲು ಸೂಚಿಸಲಾಗಿದೆ.
ಧಾರ್ಮಿಕ ವಿಚಾರವಾಗಿ ಪ್ರಚೋದನಾಕಾರಿ ಪೋಸ್ಟ್ ಅಥವಾ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳದಂತೆ,ಯಾವುದೇ ಕಾನೂನುಬಾಹಿರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳದಂತೆ ಎಚ್ಚರಿಕೆ ನೀಡಿದರು.
ಹಾಗೂ ಈ ಸಂದರ್ಭದಲ್ಲಿ ಜೂಜು, ಮಟ್ಕಾ, ಇಸ್ಪೀಟ್ ಇತ್ಯಾದಿ ಚಟುವಟಿಕೆಗಳಲ್ಲಿ ತೊಡಗುವವರ ವಿರುದ್ಧ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.
ಯುಗಾದಿ ಮತ್ತು ರಂಜಾನ್ ಹಬ್ಬದ ವೇಳೆಯಲ್ಲಿ ಹೆಚ್ಚಿನ ಜನಸಂದನಿ ಇದ್ದು ಸಾರ್ವಜನಿಕರು ತಮ್ಮ ಆಭರಣ ಮತ್ತು ಬೆಲೆ ಬಾಳುವ ವಸ್ತುಗಳ ಕುರಿತು ಹೆಚ್ಚಿನ ಜಾಗೃತೆ ವಹಿಸಬೇಕೆಂದು ಅಧಿಕಾರಿಗಳಿಳು ಸೂಚನೆ ನೀಡಿದರು. ಈ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ನಗರ ಪೊಲೀಸ್ ಠಾಣ ಸಿಬ್ಬಂದಿ ಹಾಜರಿದ್ದರು.