ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಕೃಷಿ ಕ್ಷೇತ್ರವನ್ನು ಸುಸ್ಥಿರ ಹಾಗೂ ಲಾಭದಾಯಕವಾಗಿಸುವ ಉದ್ದೇಶದಿಂದ ವಿವಿಧ ರೈತ ಪರ ಯೋಜನೆಗಳನ್ನು ಒಗ್ಗೂಡಿಸಿ, ಸಮಗ್ರ ಕೃಷಿಯನ್ನು ಉತ್ತೇಜಿಸುವ ಸಲುವಾಗಿ ಕೃಷಿ ಇಲಾಖೆ ವತಿಯಿಂದ ರೈತ ಸಮೃದ್ಧಿ ಯೋಜನೆ ಜಾರಿಗೊಳಿಸಲಾಗಿದೆ.
ಸಮಗ್ರ ಕೃಷಿ ಅಭಿವೃದ್ಧಿ ಯೋಜನೆಯಡಿ ನಾಲ್ಕು ಘಟಕಗಳಿದ್ದು, ಸಮಗ್ರ ಕೃಷಿ ಘಟಕದಡಿಯಲ್ಲಿ ಕೃಷಿ ಭಾಗ್ಯ ಯೋಜನೆಯ ಫಲಾನುಭವಿಗಳಿಗೆ ಹೆಚ್ಚಿನ ಒತ್ತು ನೀಡಲಾಗುವುದು. ಸಾಮರ್ಥ್ಯ ಅಭಿವೃದ್ಧಿ ಘಟಕದಡಿ ರೈತ ಉತ್ಪಾದಕ ಸಂಸ್ಥೆಗಳು, ಸ್ವಸಹಾಯಕ ಸಂಘಗಳು ಮತ್ತು
ರೈತ ಗುಂಪುಗಳಿಗೆ ಪ್ರೋತ್ಸಾಹಧನ ನೀಡಲಾಗುವುದು ಹಾಗೂ ಸಂಸ್ಥೆಗಳು ಅಥವಾ ಗುಂಪುಗಳು ಸಿದ್ಧಪಡಿಸುವ ಉತ್ಪನ್ನಗಳಿಗೆ ಬ್ರಾಂಡಿಂಗ್ ಹಾಗೂ ಮಾರುಕಟ್ಟೆ ಕಲ್ಪಿಸಿ, ರಪ್ತು ಮಾಡಲು ಅನುಕೂಲವಾಗುವಂತೆ ಸಹಾಯಧನ ಒದಗಿಸಲಾಗುವುದು. ಜೊತೆಗೆ ಮಣ್ಣಿನ ಗುಣಧರ್ಮಗಳ ಆಧಾರದ ಮೇಲೆ ಬೆಳೆಗಳ ಆಯ್ಕೆ ಕುರಿತು, ರೈತರಿಗೆ ಮಾರ್ಗದರ್ಶನ ನೀಡುಲಾಗುವುದು.
ಆಸಕ್ತ ರೈತರು ಮತ್ತು FPO/SHG/ರೈತ ಗುಂಪುಗಳು ಅರ್ಜಿಯನ್ನು ಹಾಕಲು ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಮಾಹಿತಿ ಪಡೆಯಬಹುದು ಎಂದು ಜಂಟಿ ಕೃಷಿ ನಿರ್ದೇಶಕಿ ಬಿ.ಜಿ ಕಲಾವತಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.