ಸರ್ಕಾರಿ ಹಾಸ್ಟೆಲ್ ಗಳಲ್ಲಿ ಗರ್ಭಿಣಿಯಾಗುತ್ತಿರುವ ಅಪ್ರಾಪ್ತ ಬಾಲಕಿಯರು

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬಡ ಕುಟುಂಬದ ಹೆಣ್ಣುಮಕ್ಕಳ ವಿದ್ಯಾಭ್ಯಾಸಕ್ಕೆ ಆಸರೆಯಾಗಿರುವ ಸರ್ಕಾರಿ ಎಸ್ಸಿ-ಎಸ್ಟಿ, ಒಬಿಸಿ ಹಾಸ್ಟೆಲ್ ಗಳಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯರು ಗರ್ಭಿಣಿ ಆಗುತ್ತಿರುವ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿರುವುದು ಅತ್ಯಂತ ಅಂತಕಕಾರಿ ಬೆಳವಣಿಗೆಯಾಗಿದ್ದು, ಇದನ್ನ ರಾಜ್ಯ ಕರ್ನಾಟಕ ಕಾಂಗ್ರೆಸ್ ಸರ್ಕಾರ ಗಂಬೀರವಾಗಿ ಪರಿಗಣಿಸಿ ಈ ಪಿಡುಗನ್ನು ತಡೆಗಟ್ಟಲು ಕ್ರಮ ಕೈಗೊಳ್ಳಬೇಕು ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಿಸಿದ್ದಾರೆ.

ಸಿಎಂ ಸಿದ್ದರಾಮಯ್ಯನವರೇ, ನಿಮಗೆ ನಿಜವಾಗಿಯೂ ದಲಿತರು, ಹಿಂದುಳಿದ ವರ್ಗಗಳು, ಬಡವರ ಮನೆಯ ಹೆಣ್ಣುಮಕ್ಕಳ ಮೇಲೆ ಕಾಳಜಿ ಇದ್ದರೆ, ಹೈಕಮಾಂಡ್ ಮೆಚ್ಚಿಸಲು ಡಿ.ಕೆ.ಶಿವಕುಮಾರ್ ಅವರ ಮನೆ ಹೋಮ್ ಟೂರ್ಮಾಡುವ ಬದಲು ಅವ್ಯವಸ್ಥೆಯ ಆಗರವಾಗಿರುವ “ಸರ್ಕಾರಿ ಹಾಸ್ಟೆಲ್ ಟೂರ್” ಮಾಡಿ.

- Advertisement - 

ಶ್ರೀಮಂತರ ಮನೆಯಲ್ಲಿ ರುಚಿಯಾದ ನಾಟಿಕೋಳಿ ಅಡುಗೆ ಮಾಡಿಸಿಕೊಂಡು ತಿನ್ನುವ ಬದಲು ಸರ್ಕಾರಿ ಹಾಸ್ಟೆಲ್ ಗಳಲ್ಲಿ ಬಡ ಮಕ್ಕಳಿಗೆ ಉಣಬಡಿಸುವ “ರುಚಿ-ಶುಚಿ”ಯಾದ ಊಟವನ್ನು ಒಮ್ಮೆ ತಿಂದು ನೋಡಿ ಎಂದು ಅಶೋಕ್ ತಾಕೀತು ಮಾಡಿದ್ದಾರೆ.

ಅಹಿಂದ ಹೆಸರಿನಲ್ಲಿ ದಲಿತರು, ಹಿಂದುಳಿದವರ ವೋಟು ಗಿಟ್ಟಿಸಿಕೊಂಡು ಅಧಿಕಾರ ಅನುಭವಿಸಿದ್ದು ಬಿಟ್ಟರೆ ನೀವು ಅವರಿಗೆ ಕೊಟ್ಟ ಕೊಡುಗೆಯಾದರೂ ಏನು? ಎಂದು ಅಶೋಕ್ ತೀಕ್ಷ್ಣವಾಗಿ ಪ್ರಶ್ನಿಸಿದ್ದಾರೆ.

- Advertisement - 

Share This Article
error: Content is protected !!
";