ಚಂದ್ರವಳ್ಳಿ ನ್ಯೂಸ್, ನವದೆಹಲಿ:
ಕರ್ನಾಟಕ ಕಾಂಗ್ರೆಸ್‌ನಲ್ಲಿ ಪಥ ಬದಲಾಗಿ ಕ್ರಾಂತಿಯಾಗುತ್ತೆ ಎನ್ನುವ ಗೊಂದಲಕ್ಕೆ ಇನ್ನೂ ತೆರೆಬಿದ್ದಿಲ್ಲ.
ಮೈಸೂರಿಗೆ ಬಂದಿದ್ದ ರಾಹುಲ್ ಗಾಂಧಿಯನ್ನು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಅವರು ವಿಮಾನ ನಿಲ್ದಾಣದಲ್ಲೇ ಭೇಟಿ ಮಾಡಿ ಹತ್ತು ನಿಮಿಷಗಳ ತಮ್ಮ ಅಹವಾಲುಗಳನ್ನು ಆಲಿಸಿ ದೆಹಲಿಗೆ ಇಬ್ಬರೂ ಬರುವಂತೆ ರಾಹುಲ್ ಸೂಚನೆ ನೀಡಿ ಹೋಗಿದ್ದರು.
ಇದೇ ಸಂದರ್ಭದಲ್ಲಿ ಡಿಕೆ ಶಿವಕುಮಾರ್ ಪ್ರತ್ಯೇಕವಾಗಿ ನಿಂತು ಅಧಿಕಾರ ಹಂಚಿಕೆ ಗೊಂದಲ ಬಗೆಹರಿಸುವಂತೆ ಒತ್ತಾಯಿಸಿದ್ದರು. ದೆಹಲಿಗೆ ಬನ್ನಿ ಎಂದು ರಾಹುಲ್ ಗಾಂಧಿ ಹೇಳಿದ್ದರು. ಅದರಂತೆ ಇದೀಗ ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ತೆರಳಿದ್ದು ರಾಹುಲ್ ಗಾಂಧಿ ಭೇಟಿ ಮಾಡುವ ಉತ್ಸಾಹದಲ್ಲಿದ್ದಾರೆ.

