ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಪಕ್ಷ ಸಂಘಟನೆ ಹಾಗೂ ಕ್ರಿಯಾಶೀಲತೆಯಲ್ಲಿ ಮಹತ್ವದ ಪಾತ್ರ ನಿರ್ವಹಿಸುತ್ತಿರುವ ನಮ್ಮ ಹೆಮ್ಮೆಯ ಮಾರ್ಗದರ್ಶಕರು, ಮುಂಚೂಣಿ ನಾಯಕರಾದ ಕೇಂದ್ರದ ಗೃಹ ಹಾಗೂ ಸಹಕಾರ ಸಚಿವರಾದ ಅಮಿತ್ ಶಾ ಅವರು ಬೆಂಗಳೂರಿಗೆ ಆಗಮಿಸಿದ ಸಂದರ್ಭದಲ್ಲಿ ಅವರನ್ನು ಅತ್ಯಂತ ಅಭಿಮಾನ ಹಾಗೂ ಪ್ರೀತಿಪೂರ್ವಕವಾಗಿ ಬಿಜೆಪಿ ನಾಯಕರು ಸ್ವಾಗತಿಸಿ ಗೌರವಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ವಿಧಾನಸಭಾ ವಿರೋಧ ಪಕ್ಷ ನಾಯಕ ಆರ್.ಅಶೋಕ್, ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ್, ಮಾಜಿ ಸಚಿವರಾದ ಸಿ.ಟಿ ರವಿ, ಪ್ರಭು ಚೌಹಾಣ್, ಸಂಸದರಾದ ಪಿ.ಸಿ ಮೋಹನ್, ಡಾ.ಸಿ.ಎನ್.ಮಂಜುನಾಥ್, ರಾಜ್ಯ ಪ್ರಧಾನ ಕಾರ್ಯದರ್ಶಿ ನಂದೀಶ್ ರೆಡ್ಡಿ, ಶಾಸಕರು ಹಾಗೂ ರಾಜ್ಯ ಕಾರ್ಯದರ್ಶಿ ಶೈಲೇಂದ್ರ ಬೆಲ್ದಾಳೆ, ಮಾಜಿ ಸಂಸದ ಡಾ.ಉಮೇಶ್ ಜಾಧವ್ ಸೇರಿದಂತೆ ಪಕ್ಷದ ಶಾಸಕರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.