ರಾಜಕೀಯ ಚಿಂತನ ಶಿಬಿರಕ್ಕೆ ಚಾಲನೆ ನೀಡಿದ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರಿನಲ್ಲಿ ಕೇಂದ್ರ ಶಿಕ್ಷಣ ಸಚಿವರಾದ ಧರ್ಮೇಂದ್ರ ಪ್ರಧಾನ್ ಅವರ ನೇತೃತ್ವದಲ್ಲಿ ಎರಡು ದಿನಗಳ ಕಾಲ ನಡೆಯಲಿರುವ ರಾಜಕೀಯ ಚಿಂತನ ಶಿಬಿರದ ಉದ್ಘಾಟನೆ ನೆರವೇರಿಸಲಾಯಿತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ತಿಳಿಸಿದರು. 

ಪ್ರಸ್ತುತ ರಾಜಕೀಯ ಪರಿಸ್ಥಿತಿಯ ನಿರ್ವಹಣೆ ಹಾಗೂ ಸವಾಲುಗಳ ಕುರಿತು ಮುಕ್ತ ಚರ್ಚೆ, ಸಂವಾದ ಹಾಗೂ ಉಪನ್ಯಾಸಗಳು ನಡೆಯಲಿದೆ. ರಾಜ್ಯ ಹಾಗೂ ದೇಶದ ಸಮಸ್ಯೆ ಹಾಗೂ ಪರಿಹಾರದ ಕುರಿತು ಬೆಳಕು ಚೆಲ್ಲುವ ವಿಚಾರಗಳು ಶಿಬಿರದಲ್ಲಿ ಮಂಡನೆಯಾಗಲಿದ್ದು, ಪಕ್ಷದ ಸಂವಿಧಾನ ಹಾಗೂ ರಾಜಕೀಯ ತಜ್ಞ ಪ್ರಮುಖರು ಶಿಬಿರಾರ್ಥಿಗಳಿಗೆ ಉಪಯುಕ್ತ ಸಲಹೆ ಹಾಗೂ ಮಾರ್ಗದರ್ಶನ ನೀಡುವರು ಎಂದು ವಿಜಯೇಂದ್ರ ತಿಳಿಸಿದರು.

- Advertisement - 

ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಡಿ.ವಿ ಸದಾನಂದಗೌಡ, ಬಸವರಾಜ ಬೊಮ್ಮಾಯಿ, ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಬಿಜೆಪಿ ಉಸ್ತುವಾರಿ ರಾಧಾಕೃಷ್ಣ ಅಗರ್ವಾಲ್‌, ಸಹ ಉಸ್ತುವಾರಿ ಸುಧಾಕರ್‌ರೆಡ್ಡಿ, ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ. ಸುನಿಲ್‌ಕುಮಾರ್‌,  

ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ವಿ.ಸೋಮಣ್ಣ, ವಿಧಾನಸಭಾ ವಿರೋಧ ಪಕ್ಷ ನಾಯಕ ಆರ್.ಅಶೋಕ್, ವಿಧಾನ ಪರಿಷತ್ ವಿರೋಧ ಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಸೇರಿದಂತೆ ಪಕ್ಷದ ಶಾಸಕರು, ವಿಧಾನ ಪರಿಷತ್ ಸದಸ್ಯರು, ಸಂಸದರು, ಹಾಗೂ ಪಕ್ಷದ ಪ್ರಮುಖರು ಭಾಗವಹಿಸಿದ್ದಾರೆ.

- Advertisement - 

 

 

 

Share This Article
error: Content is protected !!
";