ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರೊಂದಿಗೆ ಚರ್ಚಿಸಿದ ಕೇಂದ್ರ ಸಚಿವರು

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರನ್ನು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವರಾದ ಹೆಚ್. ಡಿ ಕುಮಾರಸ್ವಾಮಿ ಅವರು ನವದೆಹಲಿಗೆ ಕರೆಸಿ, ಅವರ ಜತೆಯಲ್ಲಿ ಕೇಂದ್ರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆಯ ಸಚಿವರಾದ ಅನ್ನಪೂರ್ಣ ಅವರನ್ನು ಭೇಟಿ ಮಾಡಿ ಚರ್ಚಿಸಿದರು.

ಕುಮಾರಸ್ವಾಮಿ ಅವರು ಮನವಿಗೆ ಓಗೊಟ್ಟು ನವದೆಹಲಿಗೆ ಆಗಮಿಸಿದ್ದ ಪ್ರಮುಖರ ಜತೆ ನಡೆದ ಚರ್ಚೆ ಫಲಪ್ರಧವಾಗಿತ್ತು. ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಬೇಡಿಕೆಗಳ ಈಡೇರಿಕೆಗೆ ಸಚಿವರು ಅತ್ಯಂತ ಸಕಾರಾತ್ಮಕವಾಗಿ ಸ್ಪಂದಿಸಿದರು.

- Advertisement - 

ಕರ್ನಾಟಕದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಜತೆ ನವದೆಹಲಿಯ ಹೆಚ್.ಡಿ ಕುಮಾರಸ್ವಾಮಿ ಅವರ ಗೃಹ ಕಚೇರಿಯಲ್ಲಿ ಅವರ ಬೇಡಿಕೆಗಳ ಬಗ್ಗೆ ಚರ್ಚೆ ನಡೆಸಲಾಯಿತು.

ನಂತರ ನಿಯೋಗವು ಕೇಂದ್ರದ ಶಿಕ್ಷಣ ಸಚಿವರಾದ ಪ್ರಧಾನ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿತು.
ಕುಮಾರಸ್ವಾಮಿ ಅವರ ಮನವಿ ಮೇರೆಗೆ ನೌಕರರ ಮನವಿ ಸ್ವೀಕರಿಸಿದ ಶಿಕ್ಷಣ ಸಚಿವರಿಗೆ ಹೃದಯಪೂರ್ವಕ ಧನ್ಯವಾದಗಳನ್ನು ಕುಮಾರಸ್ವಾಮಿ ಸಲ್ಲಿಸಿದರು.
ಪ್ರಧಾನಮಂತ್ರಿ ನರೇಂದ್ರ ಮೋದಿ
ಅವರ ಸರ್ಕಾರ ನಿಮ್ಮ ಜತೆಗಿದೆ ಎಂಬ ಭರವಸೆಯನ್ನು ಸಚಿವರು ನೀಡಿದರು.

- Advertisement - 

ನನ್ನ ಮನವಿಗೆ ಮನ್ನಣೆ ನೀಡಿದ ನೌಕರರ ಪ್ರಮುಖರಿಗೂ ಹಾಗೂ ಅವರ ಅಹವಾಲನ್ನು ಆಲಿಸಿದ ಸಚಿವರಿಗೂ ಧನ್ಯವಾದಗಳನ್ನು ಕೇಂದ್ರ ಸಚಿವ ಕುಮಾರಸ್ವಾಮಿ ಸಲ್ಲಿಸಿದರು. ಜೆಡಿಎಸ್ ಪಕ್ಷದ ನಾಯಕರು, ಕೋಲಾರ ಲೋಕಸಭೆ ಕ್ಷೇತ್ರದ ಸದಸ್ಯ ಮಲ್ಲೇಶ್ ಬಾಬು ಅವರು ಜತೆಯಲ್ಲಿದ್ದರು.

Share This Article
error: Content is protected !!
";