ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಭಾರತ ಸರಕಾರದ ಪರವಾಗಿ ದುಬೈ ಪ್ರವಾಸದಲ್ಲಿರುವ ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಹೆಚ್.ಡಿ ಕುಮಾರಸ್ವಾಮಿ ಅಲ್ಲಿನ ಕನ್ನಡಿಗರ ಜತೆ ಆತ್ಮೀಯ ಸಂವಾದ ನಡೆಸಿದರು.
ಹೊರನಾಡಿನಲ್ಲಿ ನೆಲೆಸಿ ತಾಯ್ನಾಡಿಗೆ ಅನನ್ಯ ಕೊಡುಗೆ ನೀಡುತ್ತಿರುವ ಚೈತನ್ಯಶೀಲ ಕನ್ನಡಿಗರ ಸಾಧನೆ ಅತ್ಯಂತ ಶ್ಲಾಘನೀಯ ಎಂದು ಕುಮಾರಸ್ವಾಮಿ ಹರ್ಷ ವ್ಯಕ್ತಪಡಿಸಿದರು.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಭಾರತವು ಜಗತ್ತಿನ 4ನೇ ದೈತ್ಯ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಿದ್ದು, ಇದೀಗ 3ನೇ ಸ್ಥಾನದತ್ತ ಭಾರತ ನಾಗಾಲೋಟದಲ್ಲಿದೆ. ಈ ಹಿನ್ನೆಲೆಯಲ್ಲಿ ಬಲಿಷ್ಠ, ಸಮೃದ್ಧ ಭಾರತ ನಿರ್ಮಾಣಕ್ಕೆ ಕನ್ನಡಿಗರ ಕೊಡುಗೆ ನನಗೆ ಸಂತಸ ಉಂಟು ಮಾಡಿದೆ ಎಂದು ಕುಮಾರಸ್ವಾಮಿ ತಿಳಿಸಿದರು.