ತಿರುಮಲ ಶ್ರೀ ವೆಂಕಟೇಶ್ವರ ಸ್ವಾಮಿ ದರ್ಶನ ಪಡೆದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ತಿರುಪತಿ:
ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಕಲಿಯುಗ ಪ್ರತ್ಯಕ್ಷ ದೈವ ತಿರುಮಲ ಶ್ರೀ ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆದರು.

​ತಮ್ಮ ಕುಟುಂಬ ಸದಸ್ಯರು ಹಾಗೂ ಆಪ್ತರೊಂದಿಗೆ ತಿರುಮಲಕ್ಕೆ ಭೇಟಿ ನೀಡಿದ ಅವರು, ವೈಕುಂಠವಾಸನ ದಿವ್ಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಸಿ.ಎಸ್. ಪುಟ್ಟರಾಜು, ಮಂಡ್ಯ ಜಿಲ್ಲಾ ಜೆಡಿಎಸ್ ಅಧ್ಯಕ್ಷರಾದ ರಮೇಶ್ ಹಾಗೂ ಸಚಿವಾಲಯದ ಹಿರಿಯ ಅಧಿಕಾರಿಗಳು ಸಚಿವರ ಜೊತೆಗಿದ್ದರು.

- Advertisement - 

​ದರ್ಶನದ ಬಳಿಕ ಮಾತನಾಡಿದ ಅವರು, “ಶ್ರೀ ವೆಂಕಟೇಶ್ವರ ಸ್ವಾಮಿಯ ದರ್ಶನ ಭಾಗ್ಯ ಸಿಕ್ಕಿದ್ದು ನನ್ನ ಸೌಭಾಗ್ಯ. ದೇಶದ ಜನತೆ ಹಾಗೂ ಸರ್ವರಿಗೂ ಭಗವಂತ ಒಳಿತನ್ನು ಮಾಡಲಿ ಎಂದು ಪ್ರಾರ್ಥಿಸಿದ್ದೇನೆ,” ಎಂದು ತಿಳಿಸಿದರು.

- Advertisement - 

​ತಿರುಮಲ ತಿರುಪತಿ ದೇವಸ್ಥಾನದ ವತಿಯಿಂದ ಸಚಿವರಿಗೆ ಪ್ರಸಾದ ಹಾಗೂ ದೇವರ ಸ್ಮರಣಿಕೆಯನ್ನು ನೀಡಿ ಗೌರವಿಸಲಾಯಿತು.

 

 

 

 

Share This Article
error: Content is protected !!
";