ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕೇಂದ್ರ ಸಂಪುಟದ ಸಹೋದ್ಯೋಗಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಸಂಸತ್ ಭವನದ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರ ಕಚೇರಿಯಲ್ಲಿ ಭೇಟಿಯಾಗಿ ರಾಜ್ಯದ ಕೈಗಾರಿಕಾ ಅಭಿವೃದ್ಧಿಯ ಬಗ್ಗೆ ಚರ್ಚೆ ನಡೆಸಿದರು.
ಈ ಸಂದರ್ಭದಲ್ಲಿ ಹುಬ್ಬಳ್ಳಿಯ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯ ಪದಾಧಿಕಾರಿಗಳು ಜತೆಯಲ್ಲಿದ್ದರು.

