ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮಂಗಳವಾರ ನಡೆದ ಎನ್‌ಡಿಎ ಸಂಸದೀಯ ಸಭೆಯಲ್ಲಿ, ಭಾರತದ ಉಪರಾಷ್ಟ್ರಪತಿ ಹುದ್ದೆಗೆ ಎನ್‌ಡಿಎ ಅಭ್ಯರ್ಥಿಯಾಗಿ ನಾಮನಿರ್ದೇಶನಗೊಂಡಿದ್ದಕ್ಕಾಗಿ ಮಹಾರಾಷ್ಟ್ರದ ಗೌರವಾನ್ವಿತ ರಾಜ್ಯಪಾಲ ಸಿ.ಪಿ. ರಾಧಾಕೃಷ್ಣನ್ ಅವರನ್ನು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ಅಭಿನಂದಿಸಿ ಹಾರೈಸಿದ್ದಾರೆ.
ಅವರ ದೀರ್ಘ ವರ್ಷಗಳ ಸೇವೆ, ಸಾರ್ವಜನಿಕ ಜೀವನಕ್ಕೆ ಸಮರ್ಪಣೆ ಮತ್ತು ರಾಷ್ಟ್ರೀಯ ಹಿತಾಸಕ್ತಿಗೆ ಬದ್ಧತೆ ಸಾರ್ವಜನಿಕ ಸೇವೆಯಲ್ಲಿರುವ ನಮಗೆಲ್ಲರಿಗೂ ಸ್ಫೂರ್ತಿಯಾಗಿದೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

