ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಹೆಸರಘಟ್ಟದಲ್ಲಿರುವ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ ಹಮ್ಮಿಕೊಂಡಿದ್ದ ರಾಷ್ಟ್ರೀಯ ತೋಟಗಾರಿಕಾ ಮೇಳ – 2025 ಸಮಾರೋಪ ಸಮಾರಂಭದಲ್ಲಿ ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಹೆಚ್.ಡಿ. ಕುಮಾರಸ್ವಾಮಿ ಪಾಲ್ಗೊಂಡು ಪ್ರಗತಿಪರ ರೈತರನ್ನು ಗೌರವಪೂರ್ವಕವಾಗಿ ಸನ್ಮಾನಿಸಿ ಗೌರವಿಸಿದರು.
ಪ್ರಧಾನಿ ಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರವು ವಿಕಸಿತ ಭಾರತ-2047, ಆತ್ಮನಿರ್ಭರ ಭಾರತ ಪರಿಕಲ್ಪನೆಯಡಿ ಕೃಷಿಯಲ್ಲಿ ಸ್ವಾವಲಂಬನೆ ಸಾಧಿಸಲು ಕ್ರಾಂತಿಕಾರಕ ಹೆಜ್ಜೆಗಳನ್ನು ಇಟ್ಟಿದೆ. ಅವರ ಒತ್ತಾಸೆ ಫಲವಾಗಿ 2025-26ನೇ ಸಾಲಿನ ಕೇಂದ್ರ ಬಜೆಟ್ ನಲ್ಲಿ ಕೃಷಿಗೆ 1,52,000 ಕೋಟಿ ಮೀಸಲು ಇಡಲಾಗಿದೆ.
ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಸಂಸದರಾದ ಡಾ.ಸಿ.ಎನ್.ಮಂಜುನಾಥ್, ಕರ್ನಾಟಕ ಕೃಷಿ ಬೆಲೆ ಆಯೋಗದ ಅಧ್ಯಕ್ಷ ಡಾ. ಅಶೋಕ್ ದಲ್ವಾಲ್, ಭಾರತೀಯ ಕೃಷಿ ವಿಜ್ಞಾನಿಗಳ ನೇಮಕಾತಿ ಮಂಡಳಿ ಅಧ್ಯಕ್ಷ ಡಾ. ಮೇಜರ್ ಸಿಂಗ್, ರಾಜ್ಯದ ಕೃಷಿ ಆಯುಕ್ತ ವೈ.ಎಸ್. ಪಾಟೀಲ್, ತೋಟಗಾರಿಕಾ ಇಲಾಖೆ ನಿರ್ದೇಶಕ ಡಿ.ಎಸ್. ರಮೇಶ್, ಮೇಳದ ಸಂಘಟನಾ ಕಾರ್ಯದರ್ಶಿ ಡಾ. ಶಂಕರ್ ಹೆಬ್ಬಾರ್ ಹಾಗೂ ಐಸಿಎಆರ್ ನಿರ್ದೇಶಕ ಡಾ. ತುಷಾರ್ ಕಾಂತಿ ಬೆಹರಾ ಅವರು ಉಪಸ್ಥಿತರಿದ್ದರು.