ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮೇಕೆದಾಟು ಯೋಜನೆ ಜಾರಿಯಾದರೆ ಕರ್ನಾಟಕ ಮತ್ತು ತಮಿಳುನಾಡು ಉಭಯ ರಾಜ್ಯಗಳಿಗೂ ಅನುಕೂಲ ಆಗಲಿದೆ ಎಂದು ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಹೇಳಿದರು.
ಮೇಕೆದಾಟು ಯೋಜನೆಯು ನಮ್ಮ ರಾಜ್ಯಕ್ಕೆ ಮಾತ್ರವಲ್ಲದೆ, ಸಂಕಷ್ಟದ ಸಮಯದಲ್ಲಿ ತಮಿಳುನಾಡಿಗೂ ಅನುಕೂಲವಾಗಲಿದೆ. ಹೀಗಾಗಿ ಇದೊಂದು ಪ್ರಮುಖವಾದ ಯೋಜನೆಯಾಗಿದೆ ಎಂದು ಅವರು ತಿಳಿಸಿದರು.
ಈ ಯೋಜನೆ ಜಾರಿಯಲ್ಲಿ ಅನಗತ್ಯವಾದ ರಾಜಕಾರಣ ಯಾರೂ ಮಾಡಬಾರದು. ಸಾರ್ವಜನಿಕರ ಹಿತಾಸಕ್ತಿ ಎಲ್ಲಕ್ಕಿಂತಲೂ ಮುಖ್ಯ. ಕೇಂದ್ರ ಸಚಿವರಾದ ಹೆಚ್.ಡಿ ಕುಮಾರಸ್ವಾಮಿ ಅವರು ಈ ಯೋಜನೆಗೆ ಸಹಕಾರ ನೀಡಬೇಕು ಎಂದು ಎಂ.ಬಿ ಪಾಟೀಲ್ ಮನವಿ ಮಾಡಿದ್ದಾರೆ.